ಲಿಂಗಧೀರನಹಳ್ಳಿ ಘನತ್ಯಾಜ್ಯ ಸಂಸ್ಕರಣ ಘಟಕ; ಪ್ರತಿಭಟನೆ ಸ್ಥಳಕ್ಕೆ ಸಚಿವ ಎಸ್.ಟಿ.ಸೋಮಶೇಖರ್ ಭೇಟಿ
ಬೆಂಗಳೂರು: ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರು, ಯಶವಂತಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಎಸ್.ಟಿ. ಸೋಮಶೇಖರ್ ಅವರು ಲಿಂಗಧೀರನಹಳ್ಳಿ ಘನತ್ಯಾಜ್ಯ ಸಂಸ್ಕರಣ ಘಟಕದ ಬಳಿ ಪ್ರತಿಭಟನೆ ನಡೆಸುತ್ತಿರುವ ಸ್ಥಳಕ್ಕೆ ಭೇಟಿ ನೀಡಿ ಪ್ರತಿಭಟನಾಕಾರರ ಅಹವಾಲು ಆಲಿಸಿದರು.
ಪ್ರತಿಭಟನೆ ನಡೆಸುತ್ತಿರುವ ಬನಶಂಕರಿ 6ನೇ ಹಂತ ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘ ಮತ್ತು ಸುತ್ತಮುತ್ತಲ ಗ್ರಾಮಸ್ಥರನ್ನು ಉದ್ದೇಶಿಸಿ ಮಾತನಾಡಿದ ಸಚಿವರು, ಘಟಕದಿಂದ ಆಗುತ್ತಿರುವ ಸಮಸ್ಯೆಗಳ ಸಂಪೂರ್ಣ ಮಾಹಿತಿಯನ್ನು ಮುಖ್ಯಮಂತ್ರಿಗಳ ಗಮನಕ್ಕೆ ತರಲಾಗಿದೆ. ಈ ಬಗ್ಗೆ ಮುಖ್ಯಮಂತ್ರಿಗಳು ಅಂತಿಮ ತೀರ್ಮಾನ ಕೈಗೊಳ್ಳಲಿದ್ದಾರೆ ಎಂದರು.
ಕಸದ ಘಟಕದಿಂದ ಬರುವಂತಹ ದುರ್ವಾಸನೆ ತಡೆಗೆ ಕ್ರಮಕೈಗೊಳ್ಳಬೇಕು, ಇಲ್ಲವೇ ಕಸದ ಘಟಕ ಬಂದ್ ಮಾಡಿ ಬೇರೆ ಕಡೆಗೆ ಸ್ಥಳಾಂತರ ಮಾಡಬೇಕು ಎಂಬುದು ಘಟಕದ ಸುತ್ತಮುತ್ತಲಿನ ನಿವಾಸಿಗಳ ಬೇಡಿಕೆಯಾಗಿದೆ ಎಂಬುದನ್ನು ಮುಖ್ಯಮಂತ್ರಿಗಳ ಗಮನಕ್ಕೆ ತರಲಾಗಿದೆ ಎಂದು ಹೇಳಿದರು.
ಸದ್ಯ ಅಧಿವೇಶನ ನಡೆಯುತ್ತಿದೆ. ಬಜೆಟ್ ಮಂಡನೆ ಬಳಿಕ ಮುಖ್ಯಮಂತ್ರಿಗಳ ಬಳಿಗೆ ಸಂಘದ ಸದಸ್ಯರನ್ನು ಕರೆದೊಯ್ದಲಾಗುವುದು. ಅಂದಿನ ಸಭೆಯಲ್ಲಿ ಮುಖ್ಯಮಂತ್ರಿಗಳು ತೀರ್ಮಾನ ಕೈಗೊಳ್ಳಲಿದ್ದಾರೆ. ಅಲ್ಲಿಯವರೆಗೆ ಪ್ರತಿಭಟನೆ ಕೈಬಿಡುವಂತೆ ಮನವಿ ಮಾಡಿದರು.
ವಸ್ತುಸ್ಥಿತಿ ಪರಿಶೀಲಿಸಿ ವರದಿ ನೀಡದೆ, ಘಟಕದ ಸುತ್ತಮುತ್ತ ವಾಸನೆ ಇಲ್ಲ ಎಂದು ಅಧಿಕಾರಿಗಳು ಕೋರ್ಟ್ ಗೆ ವರದಿ ನೀಡಿದ್ದಾರೆ ಎಂಬುದು ಆರೋಪ. ಮುಖ್ಯಮಂತ್ರಿಗಳು ಅಂತಿಮ ತೀರ್ಮಾನ ಕೈಗೊಳ್ಳುವವರೆಗೆ ಘಟಕಕ್ಕೆ ಕಸ ವಿಲೇವಾರಿ ಆಗುವುದಿಲ್ಲ. ಘಟಕ ಬಂದ್ ಮಾಡುವುದೇ ಪರಿಹಾರ. ಈ ಕುರಿತಂತೆ ಮುಖ್ಯಮಂತ್ರಿಗಳಿಗೆ ಮನವಿ ಮಾಡಿ ಕ್ರಮವಹಿಸಲಾಗುವುದು ಎಂದು ಹೇಳಿದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1J7NYrbnAi7fQ7rqJsLYg
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

























