ಕಬ್ಬಿನ ಗದ್ದೆಯಲ್ಲಿ ಚಿರತೆ ಮರಿಗಳು ಪತ್ತೆ

12/09/2023
ಚಾಮರಾಜನಗರ: ಕಬ್ಬಿನ ಗದ್ದೆಯಲ್ಲಿ ಕಾಣಿಸಿಕೊಂಡ ಚಿರತೆ ಮರಿಗಳನ್ನ ರಕ್ಷಣೆ ಮಾಡಿರುವ ಘಟನೆ ಗುಂಡ್ಲುಪೇಟೆ ತಾಲ್ಲೂಕು ಲಕ್ಕೂರು ಗ್ರಾಮದಲ್ಲಿ ನಡೆದಿದೆ.
ಗುಂಡ್ಲುಪೇಟೆ ತಾಲ್ಲೂಕು ಲಕ್ಕೂರು ಗ್ರಾಮದ ಮಹದೇವಪ್ಪ ಎಂಬುವರ ತೋಟದಲ್ಲಿ ಕಬ್ಬು ಕಟಾವು ಮಾಡುವಾಗ ಚಿರತೆ ಮರಿಗಳು ಪ್ರತ್ಯಕ್ಷವಾಗಿವೆ.
ಸ್ಥಳಕ್ಕೆ ಗುಂಡ್ಲುಪೇಟೆ ಅರಣ್ಯಾಧಿಕಾರಿಗಳ ಭೇಟಿ ನೀಡಿದ್ದಾರೆ. ತಾಯಿ ಚಿರತೆ ಬರುವಿಕೆಗಾಗಿ ಅದೇ ಸ್ಥಳದಲ್ಲಿ ಅರಣ್ಯ ಸಿಬ್ಬಂದಿ ಕಾಯುತ್ತಿದ್ದಾರೆ. ಚಿರತೆ ಸಂಚಾರದಿಂದ ಈ ಭಾಗದ ರೈತರು ಭಯಭೀತರಾಗಿದ್ದಾರೆ.