ಲಾಕ್‍ ಡೌನ್ ಜಾರಿ ಅನಿವಾರ್ಯವಾಗುತ್ತದೆ | ಸಚಿವ ಸುಧಾಕರ್ ಹೇಳಿದ್ದೇನು? - Mahanayaka

ಲಾಕ್‍ ಡೌನ್ ಜಾರಿ ಅನಿವಾರ್ಯವಾಗುತ್ತದೆ | ಸಚಿವ ಸುಧಾಕರ್ ಹೇಳಿದ್ದೇನು?

sudhakar k
11/04/2021

ಬೆಂಗಳೂರು: ಮಾರ್ಗಸೂಚಿಗಳನ್ನು ಪಾಲನೆ ಮಾಡದಿದ್ದರೆ ಲಾಕ್ಡೌನ್ ಜಾರಿ ಮಾಡುವುದು ಅನಿವಾರ್ಯವಾಗುತ್ತದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ.ಕೆ.ಸುಧಾಕರ್ ಎಚ್ಚರಿಕೆ ನೀಡಿದ್ದಾರೆ.

 

ನಗರದ ಅಟಲ್ ಬಿಹಾರಿ ವಾಜಪೇಯಿ ಆಸ್ಪತ್ರೆಯಲ್ಲಿ ಲಸಿಕೆ ಉತ್ಸವಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಜನರು ಕೋವಿಡ್ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಇಲ್ಲದಿದ್ದರೆ ಸರ್ಕಾರ ಅನಿವಾರ್ಯವಾಗಿ ಲಾಕ್ಡೌನ್ನಂತಹ ನಿಯಮಗಳನ್ನು ಜಾರಿ ಮಾಡಲೇಬೇಕಾಗುತ್ತದೆ ಎಂದು ಸುಧಾಕರ್ ಹೇಳಿದರು.

 

ಮಹಾರಾಷ್ಟ್ರದಲ್ಲಿ ಸಾರ್ವಜನಿಕರು ನಿಯಮಗಳನ್ನು ಪಾಲನೆ ಮಾಡದ ಕಾರಣ ಶುಕ್ರವಾರದಿಂದ ಸೋಮವಾರದವರಗೆ ಲಾಕ್ಡೌನ್ ಜಾರಿ ಮಾಡಲಾಗಿದೆಅಲ್ಲಿ ಒಂದೇ ಒಂದೂ ವಾಹನ ಸಂಚಾರಕ್ಕೂ ಅವಕಾಶ ಕೊಟ್ಟಿಲ್ಲ. ನಿಮ್ಮನ್ನು ರಕ್ಷಣೆ ಮಾಡುವುದು ಸರ್ಕಾರದ ಜವಾಬ್ದಾರಿ. ಅದೇ ರೀತಿ ಸರ್ಕಾರದ ನಿಯಮಗಳನ್ನು ಪಾಲನೆ ಮಾಡುವುದು ನಿಮ್ಮ ಕರ್ತವ್ಯ ಎಂದು ಅವರು ತಿಳಿಸಿದರು.

 

ಇತ್ತೀಚಿನ ಸುದ್ದಿ