ಲಾಕ್ ಡೌನ್ ವಿಸ್ತರಣೆಯಾಗುತ್ತಾ? | ಸಚಿವ ಸುಧಾಕರ್ ಏನಂದ್ರು ಗೊತ್ತಾ? - Mahanayaka
3:50 AM Saturday 25 - October 2025

ಲಾಕ್ ಡೌನ್ ವಿಸ್ತರಣೆಯಾಗುತ್ತಾ? | ಸಚಿವ ಸುಧಾಕರ್ ಏನಂದ್ರು ಗೊತ್ತಾ?

sudhakar
17/05/2021

ಬೆಂಗಳೂರು: ಲಾಕ್ ಡೌನ್ ವಿಸ್ತರಣೆಯ ಬಗ್ಗೆ ಇಂದು ಸಂಜೆ ಮುಖ್ಯಮಂತ್ರಿ ಯಡಿಯೂರಪ್ಪನವರು ಸಭೆ ಕರೆದಿದ್ದು, ಸಭೆಯ ಬಳಿಕ ಲಾಕ್ ಡೌನ್ ವಿಸ್ತರಿಸಬೇಕೋ, ಬೇಡವೋ ಎಂಬ ಬಗ್ಗೆ ತೀರ್ಮಾನ ಕೈಗೊಳ್ಳುತ್ತೇವೆ ಎಂದು  ಸಚಿವ ಸುಧಾಕರ್ ಹೇಳಿದ್ದಾರೆ.

ಬೆಂಗಳೂರಿನಲ್ಲಿಂದು ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಗ್ರಾಮೀಣ ಪ್ರದೇಶಕ್ಕೆ ಕೊರೊನಾ ಹೆಚ್ಚಾಗಿ ಹರಡುತ್ತಿದ್ದು, ಅಲ್ಲಿ ಸೋಂಕಿತರಿಗೆ ಹೇಗೆ ಕ್ವಾರಂಟೈನ್ ಮಾಡಿಸಬೇಕು. ಹೇಗೆ ಚಿಕಿತ್ಸೆ ನೀಡಬೇಕು ಎಂಬ ಬಗ್ಗೆ ಅರಿವು ಮೂಡಿಸಲು ಹೆಚ್ಚಿನ ಒತ್ತು ನೀಡಲಾಗುವುದು ಎಂದು ಸಚಿವರು ತಿಳಿಸಿದರು.

ಕೊರೊನಾ ಲಸಿಕೆ ನೀಡುವುದು ಮತ್ತು ಎರಡನೇ ಅಲೆಯನ್ನು ನಿಯಂತ್ರಿಸುವುದು ಸರ್ಕಾರ ಮುಂದಿರುವ ಸವಾಲಾಗಿದೆ.  ಗ್ರಾಮೀಣ ಪ್ರದೇಶಗಳಲ್ಲಿ ಕೊರೊನಾವನ್ನು ನಿಯಂತ್ರಿಸುವುದು ಎರಡನೇಯ ಮುಖ್ಯ ಸವಾಲಾಗಿದೆ ಎಂದು ಅವರು ಇದೇ ಸಂದರ್ಭದಲ್ಲಿ ತಿಳಿಸಿದರು.

ಇತ್ತೀಚಿನ ಸುದ್ದಿ