ಚುನಾವಣಾ ಕಾವು: ಬಿಜೆಪಿ ನಾಯಕನ ಮನೆಯಿಂದ ಜೀವಂತ ಬಾಂಬ್ ವಶಕ್ಕೆ
2024ರ ಲೋಕಸಭಾ ಚುನಾವಣೆಯ ಮೊದಲ ಹಂತದ ಮತದಾನ ಪ್ರಕ್ರಿಯೆ ಆರಂಭವಾಗಿರುವ ನಡುವೆಯೇ ಪಶ್ಚಿಮ ಬಂಗಾಳದ ಬಿಜೆಪಿ ನಾಯಕನೊಬ್ಬನ ಮನೆಯಿಂದ ಜೀವಂತ ಬಾಂಬ್ ಗಳನ್ನು ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ. ಮತದಾನದ ವೇಳೆಯಲ್ಲೂ ಅಲ್ಲಲ್ಲಿ ಹಿಂಸಾಚಾರದ ವರದಿಗಳು ರಾಜಕೀಯವಾಗಿ ಸೂಕ್ಷ್ಮವಾಗಿರುವ ಪಶ್ಚಿಮ ಬಂಗಾಳದಿಂದ ಬಂದಿವೆ.
ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನ ಆರಂಭವಾಗಿದೆ. ರಾಜಕೀಯವಾಗಿ ಸೂಕ್ಷ್ಮವಾಗಿರುವ ಪಶ್ಚಿಮ ಬಂಗಾಳದಲ್ಲಿ ಮೊದಲ ಹಂತದಲ್ಲಿ ಮೂರು ಲೋಕಸಭಾ ಕ್ಷೇತ್ರಗಳಲ್ಲಿ ಮತದಾನ ನಡೆಯುತ್ತಿದೆ. ಆದರೆ ಮತದಾನ ಆರಂಭವಾದ ಕೂಡಲೇ ಬಂಗಾಳದಲ್ಲಿ ಹಿಂಸಾಚಾರ ಆರಂಭವಾಗಿದೆ.
ದಿನ್ಹಾಟಾದಲ್ಲಿರುವ ಬಿಜೆಪಿ ಬೂತ್ ಅಧ್ಯಕ್ಷನ ಮನೆಯಲ್ಲಿ ಬಾಂಬ್ ಪತ್ತೆಯಾಗಿದ್ದು, ಅಧಿಕಾರಿಗಳು ಬಾಂಬ್ ವಶಪಡಿಸಿಕೊಂಡಿದ್ದಾರೆ. ತಮ್ಮ ಮುಖಂಡನ ಮನೆ ಮೇಲೆ ತೃಣಮೂಲ ಕಾರ್ಯಕರ್ತರು ಕಚ್ಚಾ ಬಾಂಬ್ ಎಸೆದಿದ್ದಾರೆ ಎಂದು ಬಿಜೆಪಿ ನಾಯಕರು ಆರೋಪಿಸಿದ್ದಾರೆ.
ಅದಲ್ಲದೆ, ಪಶ್ಚಿಮ ಬಂಗಾಳದ ಕೂಚ್ ಬಿಹಾರ್ ಲೋಕಸಭಾ ಕ್ಷೇತ್ರದ ಚಂದಮಾರಿಯಲ್ಲಿ ಮತಗಟ್ಟೆಯೊಂದರ ಮುಂದೆ ಕಲ್ಲು ತೂರಾಟ ನಡೆದಿರುವ ಘಟನೆ ವರದಿಯಾಗಿದೆ. ಚಂದಮಾರಿಯಲ್ಲಿ ಮತದಾರರು ಮತದಾನ ಮಾಡದಂತೆ ತೃಣಮೂಲ ಕಾಂಗ್ರೆಸ್ ಕಾರ್ಯಕರ್ತರು ಕಲ್ಲು ತೂರಾಟ ನಡೆಸಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ. ಅಲ್ಲದೆ, ಈ ಕಲ್ಲು ತೂರಾಟದಲ್ಲಿ ಬಿಜೆಪಿಯ ಮತಗಟ್ಟೆ ಏಜೆಂಟ್ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth