ಲೋಕಸಭಾ ಚುನಾವಣೆ: ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಬಗ್ಗೆ ಡಿ.ಕೆ.ಶಿವಕುಮಾರ್ ಹೇಳಿದಿಷ್ಟು..!

ಹುಬ್ಬಳ್ಳಿ: ಲೋಕಸಭಾ ಚುನಾವಣಾ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ವಿಚಾರವಾಗಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮಹತ್ವದ ಹೇಳಿಕೆ ನೀಡಿದ್ದಾರೆ.
ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆ.ಶಿವಕುಮಾರ್, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಅಧ್ಯಕ್ಷತೆಯಲ್ಲಿ ಗುರುವಾರ ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಚುನಾವಣಾ ಸಮಿತಿ ಸಭೆ ನಡೆಯಲಿದ್ದು, ಸಭೆಯಲ್ಲಿ ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಕುರಿತು ನಿರ್ಧಾರ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಇದೇ ವೇಳೆ ಜಗದೀಶ್ ಶೆಟ್ಟರ್ ವಿರುದ್ಧ ಹೇಳಿಕೆ ನೀಡಿದ ಅವರು, ಕಾಂಗ್ರೆಸ್ ಬಿಟ್ಟು ಬಿಜೆಪಿಗೆ ಮರು ಸೇರ್ಪಡೆಯಾಗಿದ್ದಕ್ಕೆ ಜಗದೀಶ ಶೆಟ್ಟರ್ ಸದ್ಯದಲ್ಲಿಯೇ ಪಶ್ಚಾತ್ತಾಪದ ಹೇಳಿಕೆ ನೀಡಲಿದ್ದಾರೆ. ಇನ್ನೊಂದು ತಿಂಗಳು ಕಾದುನೋಡಿ. ಅವರಿಂದ ಪಶ್ಚಾತ್ತಾಪದ ಹೇಳಿಕೆ ಬರಲಿದೆ ಎಂದು ತಿಳಿಸಿದರು.
ಇದೋ ಮಹದಾಯಿ ನೀರು ತಂದೆ ಬಿಟ್ಟೆವು ಎನ್ನುವ ರೀತಿಯಲ್ಲಿ ಹುಬ್ಬಳ್ಳಿಯಲ್ಲಿ ವಿಜಯೋತ್ಸವ ಮಾಡಿದ್ದರು. ರಸ್ತೆಯುದ್ದಕ್ಕೂ ಫ್ಲೆಕ್ಸ್ ಗಳನ್ನು ಹಾಕಿ ಶುಭ ಕೋರಿದ್ದರು. ಯಾಕೆ ಆಗಲಿಲ್ಲ ಎಂದು ಅವರನ್ನು ನೀವು ಗಟ್ಟಿಯಾಗಿ ಪ್ರಶ್ನಿಸಬೇಕು. ಯಾಕೆ ಇನ್ನೂ ಮಹದಾಯಿ ತೊಡಕುಗಳ ನಿವಾರಣೆ ಮಾಡುತ್ತಿಲ್ಲ..? ಕೂಡಲೇ ಸಂಬಂಧಿಸಿದ ಅಧಿಕಾರಿಗಳ ಜೊತೆ ಚರ್ಚೆ ಮಾಡಿ ಸಮಸ್ಯೆ ಬಗೆಹರಿಸಿದರೆ ಅವರಿಗೂ ಒಂದು ಗೌರವ. ಆದರೆ ಈ ಬಗ್ಗೆ ಜೋಶಿಯವರು ಚಕಾರ ಎತ್ತುತ್ತಿಲ್ಲ ಎಂದು ಇದೇ ವೇಳೆ ಟೀಕಿಸಿದರು.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth