ಲೋಕಸಭಾ ಚುನಾವಣೆ: ಕರ್ನಾಟಕದಲ್ಲಿ ಕಳೆದ ಬಾರಿಗಿಂತ ಈ ಬಾರಿ ಹೆಚ್ಚು ಮತ; ಟೈಮ್ಸ್‌ ನೌ ಇಟಿಜಿಯ ಸಮೀಕ್ಷೆ

09/03/2024

ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷವು ಕರ್ನಾಟಕ ರಾಜ್ಯದಲ್ಲಿ ಕಳೆದ ಬಾರಿಗಿಂತ ಹೆಚ್ಚು ಮತ ಪಡೆಯಲಿದೆ ಎಂದು ಟೈಮ್ಸ್‌ ನೌ ಇಟಿಜಿಯ ಸಮೀಕ್ಷೆ ಬಹಿರಂಗ ಪಡಿಸಿದೆ. ಈ ಸಮೀಕ್ಷೆಯು ಕಾಂಗ್ರೆಸ್‌ ಪಡೆಯಲ್ಲಿ ಹುಮ್ಮಸ್ಸು ಹೆಚ್ಚಿಸಿದೆ.

ಆದರೆ ಕಾಂಗ್ರೆಸ್‌ ಹುಮ್ಮಸ್ಸನ್ನು ಕುಗ್ಗಿಸುವ ವರದಿಯೂ ಸಮೀಕ್ಷೆಯಲ್ಲಿ ಬೆಳಕಿಗೆ ಬಂದಿದ್ದು, ಕಾಂಗ್ರೆಸ್ ಕೇವಲ 4-6 ಸ್ಥಾನಗಳನ್ನಷ್ಟೇ ಗೆಲ್ಲಲು ಸಾಧ್ಯ ಎನ್ನಲಾಗಿದೆ. ಬಿಜೆಪಿ -ಜೆಡಿಎಸ್‌ ಮೈತ್ರಿಗೆ ಈ ಬಾರಿ ಕರ್ನಾಟಕದಲ್ಲಿ 22-24 ಸ್ಥಾನ ದೊರೆಯಬಹುದೆಂದು ನಿರೀಕ್ಷಿಸಲಾಗಿದೆ.

ಕಳೆದ ಬಾರಿ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ರಾಜ್ಯದಲ್ಲಿ ಕೇವಲ ಒಂದು ಸ್ಥಾನ ಗಳಿಸಿ ಮುಖಭಂಗಕ್ಕೊಳಗಾಗಿತ್ತು. ಈ ಬಾರಿ ಕಾಂಗ್ರೆಸ್‌ ಮತ ಪ್ರಮಾಣ ಶೇಕಡಾ 10 ರಷ್ಟು ಹೆಚ್ಚಾಗಲಿದೆ.

ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಸಮೀಕ್ಷೆಯ ಪ್ರಕಾರ, ಕರ್ನಾಟಕದಲ್ಲಿ ವಿಧಾನಸಭಾ ವಿಜಯದ ಅಲೆಯಲ್ಲಿ ಕಾಂಗ್ರೆಸ್ ಪ್ರಬಲವಾಗಿದೆ ಮತ್ತು 2024 ರ ಲೋಕಸಭಾ ಚುನಾವಣೆಯಲ್ಲಿ 10% ಮತಗಳನ್ನು ಪಡೆಯುವ ಸಾಧ್ಯತೆಯಿದೆ. 2019 ರ ಲೋಕಸಭಾ ಚುನಾವಣೆಯಿಂದ ಬಿಜೆಪಿಯೊಂದಿಗೆ ಸ್ಥಾನಗಳ ಸಂಖ್ಯೆ ಕಡಿಮೆಯಾಗುವ ನಿರೀಕ್ಷೆಯಿದೆ, ಆದರೆ ಕರ್ನಾಟಕದಲ್ಲಿ ಉತ್ತಮ ಪ್ರದರ್ಶನ ನೀಡಲು ಪಕ್ಷವು ಶ್ರಮಿಸುತ್ತಿದೆ ಎಂದು ಟೈಮ್ಸ್ ನೌ-ಇಟಿಜಿ ಸಮೀಕ್ಷೆ ತಿಳಿಸಿದೆ.

ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth

 

ಇತ್ತೀಚಿನ ಸುದ್ದಿ

Exit mobile version