7:52 AM Wednesday 28 - January 2026

ಮುಂದಿನ ಲೋಕಸಭೆ ಚುನಾವಣೆಗೆ ಈಗಲೇ ಎಣ್ಣೆ ವ್ಯವಸ್ಥೆ; ಇಬ್ಬರು ಆರೋಪಿಗಳ ಬಂಧನ

17/02/2021

ಬೆಳಗಾವಿ:  ಮುಂದಿನ ಲೋಕಸಭಾ ಚುನಾವಣೆ ಸಮಯದಲ್ಲಿ ಹಂಚಲು ಮದ್ಯದ ಬಾಟಲಿಗಳನ್ನು ಅಕ್ರಮವಾಗಿ  ಸಂಗ್ರಹಿಸಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಅಂತಾರಾಜ್ಯ ಮದ್ಯವನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿರುವ ಬಗ್ಗೆ ದೊರೆತ ಖಚಿತ ಮಾಹಿತಿಯಂತೆ  ಸಿಸಿಬಿಐ ಪೊಲೀಸರು, ಡಿಸಿಪಿ ವಿಕ್ರಮ್ ಆಮ್ಟೆ ನೇತೃತ್ವದ ಸಿಸಿಐಬಿ ಎಸಿಪಿ ನಾರಾಯಣ ಭರಮನಿ, ಪಿಐ ಸಂಜೀವ ಕಾಂಬಳ ತಂಡ ಕಾರ್ಯಾಚರಣೆ ನಡೆಸಿದೆ.

ಕಾರ್ಯಾಚರಣೆಯ ವೇಳೆ ಆರೋಪಿಗಳಾದ ರಾಜೇಶ್ ನಾಯಿಕ, ಶಂಕರ್ ದೇಸನೂರ ಇವರನ್ನು ಬಂಧಿಸಲಾಗಿದೆ. ಜೊತೆಗೆ ವಿವಿಧ ಬ್ರ್ಯಾಂಡ್ ನ 13 ಲಕ್ಷ ರೂ ಮೌಲ್ಯದ ಮದ್ಯದ ಬಾಟಲಿಗಳನ್ನು ಹಾಗೂ 1 ಕಾರನ್ನು ವಶಪಡಿಸಿಕೊಂಡಿದ್ದಾರೆ.

ಮುಂದಿನ ಲೋಕಸಭಾ ಚುನಾವಣೆಯ ವೇಳೆ ಮಾರಾಟ ಮಾಡಲು ಅಥವಾ ಹಂಚಲು ಈ ಬಾಟಲಿಗಹಳನ್ನು ಅಕ್ರಮವಾಗಿ ಸಂಗ್ರಹಿಸಿಡಲಾಗಿತ್ತು ಎಂದು ಹೇಳಲಾಗಿದೆ.

ಇತ್ತೀಚಿನ ಸುದ್ದಿ

Exit mobile version