ವಾಣಿಜ್ಯ ಅಧಿಕಾರಿ ನೇತ್ರಾವತಿ ಮನೆ ಮೇಲೆ ಲೋಕಾಯುಕ್ತ ದಾಳಿ

nethravati house
31/01/2024

ಚಿಕ್ಕಮಗಳೂರು:  ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಆರೋಪ ಹಿನ್ನೆಲೆ ವಾಣಿಜ್ಯ ಅಧಿಕಾರಿ ನೇತ್ರಾವತಿ ಮನೆ ಮೇಲೆ ಲೋಕಾಯುಕ್ತ ದಾಳಿ‌ ನಡೆಸಲಾಗಿದೆ.

ತರೀಕೆರೆ ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಯಾಗಿರುವ ನೇತ್ರಾವತಿ ಅವರ ಕಡೂರು ಪಟ್ಟಣದಲ್ಲಿರುವ ಮನೆ ಮೇಲೆ ದಾಳಿ ನಡೆಸಲಾಗಿದೆ.

13 ವರ್ಷದಿಂದ ಅಧಿಕ ಆಸ್ತಿ ಹೊಂದಿರುವ ಆರೋಪದ ಹಿನ್ನೆಲೆಯಲ್ಲಿ  ದಾಳಿ ನಡೆಸಲಾಗಿದೆ. ಸದ್ಯ   ಲೋಕಾಯುಕ್ತ ಅಧಿಕಾರಿಗಳು ದಾಖಲೆಗಳನ್ನ ಪರಿಶೀಲನೆ ನಡೆಸುತ್ತಿದ್ದಾರೆ.

ಲೋಕಾಯುಕ್ತ ಇನ್ಸ್ ಸ್ಪೆಕ್ಟರ್ ಅನಿಲ್ ರಾಥೋಡ್ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ.

ಇತ್ತೀಚಿನ ಸುದ್ದಿ

Exit mobile version