ಹಿರಿಯ ಉಪನೋಂದಣಾಧಿಕಾರಿಗೆ ಸೇರಿದ ತೋಟದ ಜಮೀನಿನ ಮೇಲೆ ಲೋಕಾಯುಕ್ತ ದಾಳಿ

ಹನೂರು: ತಾಲೂಕಿನ ಅಜ್ಜೀಪುರ ಗ್ರಾಮದ ಹೊರವಲಯದ ತೋಟದ ಜಮೀನೊಂದರ ಮೇಲೆ ಲೋಕಾಯುಕ್ತ ಅಧಿಕಾರಿಗಳು ಬುಧವಾರ ಬೆಳ್ಳಂ ಬೆಳಗ್ಗೆ ದಾಳಿ ನಡೆಸಿದ್ದಾರೆ.
ಅಜ್ಜೀಪುರ ಗ್ರಾಮದ ಶಿವಶಂಕರ್ ಮೂರ್ತಿ ಎಂಬುವವರು ಹಾಲಿ ನಂಜನಗೂಡು ಪಟ್ಟಣದಲ್ಲಿ ಹಿರಿಯ ಉಪನೋಂದಣಾಧಿಕಾರಿಗಳಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಲೋಕಾಯುಕ್ತ ಅಧಿಕಾರಿಗಳು ಇಂದು ಹಲವಾರು ಅಧಿಕಾರಿಗಳ ಮೇಲೆ ದಾಳಿ ನಡೆಸಿದ ಹಿನ್ನೆಲೆ ಶಿವಶಂಕರ್ ಮೂರ್ತಿ ಅವರಿಗೆ ಸೇರಿರುವ ಅಜ್ಜೀಪುರ ಗ್ರಾಮದ ತೋಟದ ಮನೆಯ ಮೇಲೂ ದಾಳಿ ನಡೆಸಲಾಗಿದೆ.
ಲೋಕಾಯುಕ್ತ ಅಧಿಕಾರಿಗಳ ತಂಡ ಒಂದು ಕಾರಿನಲ್ಲಿ ಆಗಮಿಸಿ ದಾಳಿ ನಡೆಸಿದ್ದು ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JdaVhZJabeA0V7XQ5ZJp92
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw