4:12 PM Tuesday 16 - December 2025

ರಾಜ್ಯದಾದ್ಯಂತ ಲೋಕಾಯುಕ್ತ ದಾಳಿ: ಆದಾಯಕ್ಕಿಂತ ಹೆಚ್ಚಿನ ಆಸ್ತಿ ಪತ್ತೆ!

lokayukta raid
16/12/2025

Lokayukta Raid: ಬೆಂಗಳೂರು: ಕರ್ನಾಟಕದಾದ್ಯಂತ ಲೋಕಾಯುಕ್ತ ಅಧಿಕಾರಿಗಳು ಇಂದು  ಸರ್ಕಾರಿ ಅಧಿಕಾರಿಗಳ ನಿವಾಸ ಮತ್ತು ಕಚೇರಿಗಳ ಮೇಲೆ ಏಕಕಾಲಕ್ಕೆ ದಾಳಿ ನಡೆಸಿದ್ದಾರೆ. ಧಾರವಾಡ, ಶಿವಮೊಗ್ಗ, ಮಂಡ್ಯ, ಚಿಕ್ಕಮಗಳೂರು ಮತ್ತು ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಶೋಧ ಕಾರ್ಯ ನಡೆದಿದೆ.

ಧಾರವಾಡದಲ್ಲಿ ಕೃಷಿ ಇಲಾಖೆ ಜಂಟಿ ನಿರ್ದೇಶಕ ರಾಜಶೇಖರ್ ಅವರ ಮೂರು ಸ್ಥಳಗಳ ಮೇಲೆ ರೇಡ್ ನಡೆದಿದೆ. ಈ ವೇಳೆ ಆತಂಕಗೊಂಡ ರಾಜಶೇಖರ್, ಸುಮಾರು 50,000 ರೂಪಾಯಿ ನಗದನ್ನು ಕಮೋಡ್‌ಗೆ ಸುರಿದು ಫ್ಲಶ್ ಮಾಡಲು ಯತ್ನಿಸಿದ್ದಾರೆ.

ಗ್ರಾಮೀಣ ನೀರು ಸರಬರಾಜು ಇಲಾಖೆಯ ಕಾರ್ಯಪಾಲಕ ಇಂಜಿನಿಯರ್ ರೂಪ್ಲಾ ನಾಯ್ಕ ಅವರಿಗೆ ಸೇರಿದ ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಬೆಂಗಳೂರಿನ ಸ್ಥಳಗಳ ಮೇಲೆ ದಾಳಿ ನಡೆಸಿ, ಆದಾಯ ಮೀರಿದ ಆಸ್ತಿ ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿದೆ.

ಸಾರ್ವಜನಿಕ ದೂರುಗಳ ಹಿನ್ನೆಲೆಯಲ್ಲಿ ಮಂಡ್ಯದ ಪಿಆರ್‌ ಇಡಿ ಅಧೀಕ್ಷಕ ಬೈರೇಶ್ ಅವರ ಮನೆ ಮತ್ತು ಕಚೇರಿ ಮೇಲೂ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ಈ ಕಾರ್ಯಾಚರಣೆಗಳಲ್ಲಿ ಮಹತ್ವದ ದಾಖಲೆಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ವರದಿಯಾಗಿದೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

ಇತ್ತೀಚಿನ ಸುದ್ದಿ

Exit mobile version