ಚಿಕ್ಕಮಗಳೂರು ACF ಶ್ರೀನಿವಾಸ್ ಮನೆ, ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ!

shrinivas.jpg
16/06/2026

ಚಿಕ್ಕಮಗಳೂರಿನಲ್ಲಿ ಭ್ರಷ್ಟಾಚಾರ ನಿಗ್ರಹ ದಳ (ಲೋಕಾಯುಕ್ತ) ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಯೊಬ್ಬರ ಆಸ್ತಿಪಾಸ್ತಿಗಳ ಮೇಲೆ ಏಕಕಾಲದಲ್ಲಿ ದಾಳಿ ನಡೆಸಿದೆ.

ಚಿಕ್ಕಮಗಳೂರಿನ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ (ACF) ಶ್ರೀನಿವಾಸ್ ಅವರ ಮನೆ ಹಾಗೂ ಕಚೇರಿಗಳ ಮೇಲೆ ಇಂದು ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಇಲಾಖೆಯಲ್ಲಿ ವ್ಯಾಪಕ ಅಕ್ರಮ ಎಸಗಿರುವ ಹಾಗೂ ಆದಾಯಕ್ಕಿಂತ ಹೆಚ್ಚಿನ ಆಸ್ತಿ ಗಳಿಸಿರುವ ನಿಖರ ದೂರಿನ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.

ಲೋಕಾಯುಕ್ತ ಅಧಿಕಾರಿಗಳ ತಂಡವು ಶ್ರೀನಿವಾಸ್ ಅವರಿಗೆ ಸಂಬಂಧಿಸಿದ ಹಲವು ಸ್ಥಳಗಳ ಮೇಲೆ ಏಕಕಾಲಕ್ಕೆ ದಾಳಿ ನಡೆಸಿ ದಾಖಲೆಗಳ ಪರಿಶೀಲನೆ ನಡೆಸುತ್ತಿದೆ:
ಹೌಸಿಂಗ್ ಬೋರ್ಡ್ ಕಾಲೋನಿಯಲ್ಲಿರುವ ಎಸಿಎಫ್ ಶ್ರೀನಿವಾಸ್ ಅವರ ಸ್ವಗೃಹ, ಶ್ರೀನಿವಾಸ್ ಅವರ ಅಧಿಕೃತ ಕಚೇರಿಗೆ ದಾಳಿ ನಡೆಸಲಾಗಿದೆ. ಕಡೂರಿನಲ್ಲಿರುವ ಶ್ರೀನಿವಾಸ್ ಅವರ ಸಹೋದರಿಯ ನಿವಾಸದ ಮೇಲೂ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಈ ಇಡೀ ಕಾರ್ಯಾಚರಣೆಯು ಲೋಕಾಯುಕ್ತ ಅಧಿಕಾರಿ ತಿರುಮಲೇಶ್ ಅವರ ನೇರ ನೇತೃತ್ವದಲ್ಲಿ ನಡೆದಿದ್ದು, ಸದ್ಯ ಅಧಿಕಾರಿಗಳು ಪ್ರಮುಖ ದಾಖಲೆಗಳು, ಬ್ಯಾಂಕ್ ಖಾತೆ ಹಾಗೂ ಆಸ್ತಿ ಪಾಸ್ತಿಗಳ ಪರಿಶೀಲನೆಯಲ್ಲಿ ತೊಡಗಿದ್ದಾರೆ. ಹೆಚ್ಚಿನ ಮಾಹಿತಿ ಸದ್ಯದಲ್ಲೇ ಹೊರಬರಬೇಕಿದೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

ಇತ್ತೀಚಿನ ಸುದ್ದಿ

Exit mobile version