ಉತ್ತರ ಪ್ರದೇಶದಲ್ಲಿ ಬಿಜೆಪಿಗೆ ಭಾರೀ ಹಿನ್ನಡೆ: ಇಂಡಿಯಾ ಮೈತ್ರಿಕೂಟಕ್ಕೆ ಮುನ್ನಡೆ - Mahanayaka

ಉತ್ತರ ಪ್ರದೇಶದಲ್ಲಿ ಬಿಜೆಪಿಗೆ ಭಾರೀ ಹಿನ್ನಡೆ: ಇಂಡಿಯಾ ಮೈತ್ರಿಕೂಟಕ್ಕೆ ಮುನ್ನಡೆ

uttar pradesh
04/06/2024

ಉತ್ತರ ಪ್ರದೇಶದಲ್ಲಿ ಬಿಜೆಪಿ ಹಿನ್ನಡೆ ಸಾಧಿಸಿದ್ದು, ಇಂಡಿಯಾ ಮೈತ್ರಿಕೂಟ ಉತ್ತರ ಪ್ರದೇಶದಲ್ಲಿ ಭಾರೀ ಮುನ್ನಡೆ ಸಾಧಿಸಿದೆ


Provided by

ಉತ್ತರ ಪ್ರದೇಶದ 39 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ, ಕಾಂಗ್ರೆಸ್​​ ಮತ್ತು ಎಸ್​ಪಿ ಮೈತ್ರಿ ಕೂಟಕ್ಕೆ 41 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ.

ರಾಯ್​ ಬರೇಲಿ ಕಾಂಗ್ರೆಸ್​ ಅಭ್ಯರ್ಥಿ ರಾಹುಲ್​ ಗಾಂಧಿ ಮುನ್ನಡೆ ಸಾಧಿಸಿದ್ದಾರೆ. ಅಮೇಥಿಯಲ್ಲಿ ಸಚಿವೆ ಸ್ಮೃತಿ ಇರಾನಿಗೆ ಭಾರೀ ಹಿನ್ನಡೆಯಾಗಿದೆ.

ಕಳೆದ ಲೋಕಸಭಾ ಚುನಾವಣೆಯಲ್ಲಿ ಉತ್ತರ ಪ್ರದೇಶದಲ್ಲಿ ಬಿಜೆಪಿ 62 ಸೀಟು ಗೆದ್ದಿತ್ತು. ಅಪ್ನಾ ದಳ 2 ಸ್ಥಾನದಲ್ಲಿ ಗೆದ್ದಿತ್ತು. ಸೋನಿಯಾ ಗಾಂಧಿ ರಾಯಬರೇಲಿಯನ್ನು ಉಳಿಸಿಕೊಂಡ ಕಾರಣ ಕಾಂಗ್ರೆಸ್ ಕೇವಲ ಒಂದು ಸ್ಥಾನ ಮಾತ್ರ ಗಳಿಸಿತ್ತು.

ಸಮಾಜವಾದಿ ಪಕ್ಷ ಮತ್ತು ಬಹುಜನ ಸಮಾಜ ಪಕ್ಷಗಳೊಂದಿಗೆ ರಾಷ್ಟ್ರೀಯ ಲೋಕದಳ (ಆರ್‌ಎಲ್‌ಡಿ) ಮೈತ್ರಿ ಮಾಡಿಕೊಂಡಿತ್ತು. ಬಿಎಸ್‌ ಪಿ 10, ಎಸ್‌ ಪಿ ಐದು ಸ್ಥಾನಗಳನ್ನು ಪಡೆದರೆ, ಆರ್‌ಎಲ್‌ ಡಿ ಶೂನ್ಯ ಸ್ಥಾನ ಪಡೆದಿತ್ತು.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/JItjEWZ9e5fBWDL6CkTr97

ಇತ್ತೀಚಿನ ಸುದ್ದಿ