ರಾಜ್ಯ ಹೆದ್ದಾರಿ ರಸ್ತೆಯಲ್ಲಿ ಒಂಟಿಸಲಗ ರೌಂಡ್ಸ್
ಚಿಕ್ಕಮಗಳೂರು: ರಾಜ್ಯ ಹೆದ್ದಾರಿ ರಸ್ತೆಯಲ್ಲಿ ಒಂಟಿಸಲಗವೊಂದು ರೌಂಡ್ಸ್ ಹಾಕಿದ್ದು, ಕಾಡಾನೆಯ ಓಡಾಟದಿಮದಾಗಿ ಸಾರ್ವಜನಿಕರು ಆತಂಕಕ್ಕೀಡಾಗಿದ್ದಾರೆ.
ಎನ್.ಆರ್.ಪುರ ತಾಲೂಕಿನ ಅರಂಬಳ್ಳಿ ಮುಖ್ಯರಸ್ತೆಯಲ್ಲಿ ಘಟನೆ ನಡೆದಿದೆ. ಕಾಡಾನೆ ಓಡಾಟದಿಂದ ವಾಹನ ಸವಾರರಲ್ಲಿ ಆತಂಕ ಸೃಷ್ಟಿಯಾಗಿದೆ. ರಸ್ತೆಯಲ್ಲೇ ಕಾಡಾನೆ ಇದ್ದ ಕಾರಣ ವಾಹನ ಸವಾರರು ಕಾಡಾನೆ ತೆರಳುವವರೆಗೆ ಕಾದು ಬಳಿಕ ಪ್ರಯಾಣ ಮುಂದುವರಿಸಬೇಕಾಯಿತು.
ಎನ್.ಆರ್.ಪುರ ತಾಲೂಕಿನ ಅರಂಬಳ್ಳಿ ಮುಖ್ಯರಸ್ತೆಯಲ್ಲಿ ಘಟನೆ ನಡೆದಿದೆ. ಕೆಲ ಕಾಲ ರಸ್ತೆಯಲ್ಲಿಯೇ ಇದ್ದು ನಂತರ ಕಾಡಾನೆ ಕಾಡಿನತ್ತ ತೆರಳಿದೆ. ಈ ಭಾಗದಲ್ಲಿ ಒಂದು ತಿಂಗಳಲ್ಲಿ ಇಬ್ಬರು ಕಾಡಾನೆ ದಾಳಿಗೆ ಬಲಿಯಾಗಿದ್ದಾರೆ. ಕಾಡಾನೆ ಸ್ಥಳಾಂತರ ಮಾಡುವಂತೆ ಸ್ಥಳೀಯರು ಅರಣ್ಯ ಇಲಾಖೆಗೆ ಆಗ್ರಹಿಸುತ್ತಲೇ ಇದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: