ಒಳ ಮೀಸಲಾತಿ ಅನುಷ್ಠಾನ ಬಗ್ಗೆ ಸುದೀರ್ಘ ಚರ್ಚೆ: ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಹೇಳಿದ್ದೇನು? - Mahanayaka
5:59 PM Tuesday 18 - November 2025

ಒಳ ಮೀಸಲಾತಿ ಅನುಷ್ಠಾನ ಬಗ್ಗೆ ಸುದೀರ್ಘ ಚರ್ಚೆ: ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಹೇಳಿದ್ದೇನು?

siddaramaiah
30/10/2025

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರ ಅಧ್ಯಕ್ಷತೆಯಲ್ಲಿ ವಿಧಾನಸೌಧದಲ್ಲಿ ಪರಿಶಿಷ್ಟ ಜಾತಿಗಳ ಒಳ ಮೀಸಲಾತಿಯ ಅನುಷ್ಠಾನದ ಕುರಿತಂತೆ ಇರುವ ಸಮಸ್ಯೆಗಳ ಸಭೆ ನಡೆಸಿ, ಸುದೀರ್ಘವಾಗಿ ಚರ್ಚೆ ನಡೆಯಿತು.

ಸಭೆಯಲ್ಲಿ ಒಳ ಮೀಸಲಾತಿ ಕುರಿತಾಗಿ ಸಚಿವ ಸಂಪುಟ ಸಭೆಯ ತೀರ್ಮಾನಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಲು ಕ್ರಮ ಕೈಗೊಳ್ಳಲಾಗುವುದು. ರೋಸ್ಟರ್ ಜಾರಿ ಕುರಿತಾಗಿ ಎಲ್ಲರ ಅಹವಾಲುಗಳನ್ನು ಆಲಿಸಿ, ಯಾವುದೇ ಜಾತಿಗೆ ರೋಸ್ಟರ್‌ ನಲ್ಲಿ ಅನ್ಯಾಯವಾಗದಂತೆ ಖಾತ್ರಿಪಡಿಸಲಾಗುವುದು ಎಂದು ಸಿಎಂ ತಿಳಿಸಿದರು.

ಜಾತಿ ಪ್ರಮಾಣ ಪತ್ರ ಯಾವ ರೀತಿಯಲ್ಲಿ ನೀಡಬೇಕು ಎಂಬ ಕುರಿತು ವಿವರವಾದ ಮಾರ್ಗಸೂಚಿಯನ್ನು ಬಿಡುಗಡೆಗೊಳಿಸಲಾಗಿದೆ. ನೇಮಕಾತಿಗೆ ಇದ್ದ ನಿರ್ಬಂಧವನ್ನು ತೆರವುಗೊಳಿಸಿದ ಬಳಿಕ ಅಭ್ಯರ್ಥಿಗಳ ವಯೋಮಿತಿಯನ್ನು ಒಂದು ಅವಧಿಗೆ ಹೆಚ್ಚಳ ಮಾಡಲಾಗಿದೆ. ಕೆಇಎಯಲ್ಲಿ ಈಗಾಗಲೇ ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದೆ ಎಂದು ಸಿದ್ದರಾಮಯ್ಯ ಹೇಳಿದರು.

ಒಳ ಮೀಸಲಾತಿ ಜಾರಿ ಕುರಿತಾಗಿ ಸುಪ್ರೀಂಕೋರ್ಟ್ ನಿರ್ದೇಶನಗಳ ಪ್ರಕಾರ ಕಾಯ್ದೆ ಜಾರಿಗೊಳಿಸಲು ಕ್ರಮ ಕೈಗೊಳ್ಳಲಾಗುವುದು ಅಂತ ತಿಳಿಸಿದರು.

ಈ ಸಂದರ್ಭದಲ್ಲಿ  ಸಚಿವರಾದ ಜಿ.ಪರಮೇಶ್ವರ್, ಎಚ್.ಸಿ.ಮಹದೇವಪ್ಪ, ಕೆ.ಎಚ್.ಮುನಿಯಪ್ಪ, ಶಿವರಾಜ ತಂಗಡಗಿ, ಎಚ್.ಕೆ.ಪಾಟೀಲ್, ಪ್ರಿಯಾಂಕ್ ಖರ್ಗೆ, ಬಿ.ಆರ್.ತಿಮ್ಮಾಪುರ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್, ಅಪರ ಮುಖ್ಯಕಾರ್ಯದರ್ಶಿ ಅಂಜುಂ ಪರ್ವೇಜ್ ಇನ್ನು ಮುಂತಾದವರು ಉಪಸ್ಥಿತರಿದ್ದರು.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

ಇತ್ತೀಚಿನ ಸುದ್ದಿ