‘ಶ್ರೀರಾಮ ಬಿಜೆಪಿಯ ಚುನಾವಣಾ ಅಭ್ಯರ್ಥಿ’: ಅಯೋಧ್ಯೆ ಮಂದಿರ ಉದ್ಘಾಟನೆ ಕುರಿತು ಬಿಜೆಪಿ ವಿರುದ್ಧ ಶಿವಸೇನೆ ವಾಗ್ದಾಳಿ

30/12/2023

ಶಿವಸೇನೆ (ಯುಬಿಟಿ) ಮುಖಂಡ ಸಂಜಯ್ ರಾವತ್ ಶನಿವಾರ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಅಯೋಧ್ಯೆಯಲ್ಲಿ ರಾಮ ಮಂದಿರ ಉದ್ಘಾಟನೆಯನ್ನು ರಾಜಕೀಯಗೊಳಿಸಲಾಗುತ್ತಿದೆ ಎಂದು ಆರೋಪಿಸಿದ್ದಾರೆ. ಪಕ್ಷವು ಶೀಘ್ರದಲ್ಲೇ ಚುನಾವಣೆಗೆ “ಭಗವಾನ್ ರಾಮನನ್ನು ತಮ್ಮ ಅಭ್ಯರ್ಥಿಯನ್ನಾಗಿ ಘೋಷಿಸುತ್ತದೆ” ಎಂದು ರಾವತ್ ಹೇಳಿದ್ದಾರೆ.

ರಾಮ ಮಂದಿರದ ಪ್ರತಿಷ್ಠಾಪನಾ ಸಮಾರಂಭಕ್ಕೆ ಆಹ್ವಾನದ ಬಗ್ಗೆ ಕೇಳಿದ ಪ್ರಶ್ನೆಗಳಿಗೆ ಉತ್ತರಿಸಿದ ಶಿವಸೇನಾ ನಾಯಕ, “ಈಗ, ಉಳಿದಿರುವ ಏಕೈಕ ವಿಷಯವೆಂದರೆ, ಭಗವಾನ್ ರಾಮನನ್ನು ಚುನಾವಣೆಗೆ ತಮ್ಮ ಅಭ್ಯರ್ಥಿ ಎಂದು ಬಿಜೆಪಿ ಘೋಷಿಸುತ್ತದೆ.

ಭಗವಾನ್ ರಾಮನ ಹೆಸರಿನಲ್ಲಿ ತುಂಬಾ ರಾಜಕೀಯ ಮಾಡಲಾಗುತ್ತಿದೆ” ಎಂದು ಅವರು ಹೇಳಿದ್ದಾರೆ.
ಜನವರಿ 22 ರಂದು ನಡೆಯುವ ಅಯೋಧ್ಯೆಯಲ್ಲಿ ರಾಮ ಮಂದಿರದ ಉದ್ಘಾಟನೆ ಬಿಜೆಪಿ ಕಾರ್ಯಕ್ರಮವೇ ಹೊರತು ರಾಷ್ಟ್ರೀಯ ಕಾರ್ಯಕ್ರಮವಲ್ಲ ಎಂದು ರಾವತ್ ಗುರುವಾರ ಹೇಳಿದ್ದರು. ಬಿಜೆಪಿ ಭಗವಾನ್ ರಾಮನನ್ನು ಅಪಹರಿಸಿದೆ ಎಂದು ಅವರು ಆರೋಪಿಸಿದರು.

ಆ ದಿನ ನಿಗದಿಯಾಗಿರುವ ವಿಗ್ರಹ ಪ್ರತಿಷ್ಠಾಪನಾ ಸಮಾರಂಭದಲ್ಲಿ ಶಿವಸೇನೆ (ಯುಬಿಟಿ) ಮುಖ್ಯಸ್ಥ ಉದ್ಧವ್ ಠಾಕ್ರೆ ಭಾಗವಹಿಸುತ್ತಾರೆಯೇ ಎಂಬ ಪ್ರಶ್ನೆಗೆ ಅವರು ಈ ರೀತಿ ಪ್ರತಿಕ್ರಿಯಿಸಿದರು.

ಇತ್ತೀಚಿನ ಸುದ್ದಿ

Exit mobile version