ಖಾಸಗಿ ಶಾಲಾ ಬಸ್ ಗೆ ಲಾರಿ ಡಿಕ್ಕಿ: ವಿದ್ಯಾರ್ಥಿಗಳಿಗೆ ಗಾಯ

brahmavara
18/06/2025

ಉಡುಪಿ:  ಖಾಸಗಿ ಶಾಲಾ ಬಸ್ ಗೆ  ಲಾರಿಯೊಂದು ಡಿಕ್ಕಿ ಹೊಡೆದ ಘಟನೆ  ಬ್ರಹ್ಮಾವರದ ಧರ್ಮಾವರ ಆಡಿಟೋರಿಯಂ ಬಳಿಯ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದಿದೆ.

ಬುಧವಾರ ಜಿ.ಎಂ. ವಿದ್ಯಾನಿಕೇತ ಆಂಗ್ಲಮಾಧ್ಯಮ ಶಾಲೆಯ ವಿದ್ಯಾರ್ಥಿಗಳಿದ್ದ ಬಸ್ ಕುಂದಾಪುರದಿಂದ ಧರ್ಮಾವರ ಆಡಿಟೋರಿಯಂ ಸರ್ಕಲ್ ಬಳಿ ಯೂಟರ್ನ್ ಹೊಡೆಯುತ್ತಿದ್ದ ವೇಳೆ ಬಸ್ ನ ಒಂದು ಬದಿಗೆ ಲಾರಿ ಹಿಂದಿನಿಂದ ಡಿಕ್ಕಿಯಾದ ಪರಿಣಾಮ ಈ ಅಪಘಾತ ಸಂಭವಿಸಿದೆ.

ಘಟನೆಯಲ್ಲಿ ಬಸ್ ನಲ್ಲಿದ್ದ ವಿದ್ಯಾರ್ಥಿಗಳು ಸಣ್ಣಪುಟ್ಟ ಗಾಯಗಳಿಂದ ಅಪಾಯದಿಂದ ಪಾರಾಗಿದ್ದಾರೆ. ಗಾಯಾಳು ವಿದ್ಯಾರ್ಥಿಗಳನ್ನು ಬ್ರಹ್ಮಾವರ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಯಿತು. ಸ್ಥಳಕ್ಕೆ ಬ್ರಹ್ಮಾವರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

ಇತ್ತೀಚಿನ ಸುದ್ದಿ

Exit mobile version