ಲಾರಿ ಚಾಲಕ ಹೃದಯಾಘಾತಕ್ಕೆ ಬಲಿ

ಹಾವೇರಿ: ಲಾರಿ ಚಾಲಕರೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ ಮೊಟೇಬೆನ್ನೂರು ಗ್ರಾಮದ ಬಳಿ ನಡೆದಿದೆ.
ಬಾಬುರಾವ್ ಖಮ್ಮಟ್ (50) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಇವರು ಮಹಾರಾಷ್ಟ್ರದ ಉಮ್ರಾವತಿ ಗ್ರಾಮದ ನಿವಾಸಿಯಾಗಿದ್ದಾರೆ.
ಮಹಾರಾಷ್ಟ್ರದಿಂದ ಬೆಂಗಳೂರಿಗೆ ಗೂಡ್ಸ್ ಲಾರಿಯಲ್ಲಿ ಹೋಗುತ್ತಿದ್ದ ವೇಳೆ ಚಾಲಕನಿಗೆ ಏಕಾಏಕಿ ಎದೆನೋವು ಕಾಣಿಸಿಕೊಂಡಿತ್ತು. ತಕ್ಷಣವೇ ಚಾಲಕನನ್ನು ಹಾವೇರಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.
ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿ ಖಾಸಗಿ ಆಸ್ಪತ್ರೆಯ ರವಾನೆಗೆ ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಚಾಲಕ ಸಾವನ್ನಪ್ಪಿದ್ದಾರೆ. ಘಟನೆ ಸಂಬಂಧ ಬ್ಯಾಡಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/H1duNIQRfXnJcfQKWPzNqD