ಲಾರಿ ಚಾಲಕನಿಗೆ ಹೃದಯಾಘಾತ: ಟೆಂಪೋ, ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಲಾರಿ: ಚಾಲಕ ಸಾವು - Mahanayaka

ಲಾರಿ ಚಾಲಕನಿಗೆ ಹೃದಯಾಘಾತ: ಟೆಂಪೋ, ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಲಾರಿ: ಚಾಲಕ ಸಾವು

chamarajanagara
02/10/2023

ಚಾಮರಾಜನಗರ: ಲಾರಿ ಚಾಲನೆ ವೇಳೆ ಚಾಲಕನಿಗೆ ಹೃದಯಾಘಾತವಾಗಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಚಾಲಕ ಸ್ಥಳದಲ್ಲೇ ಅಸುನೀಗಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ ಬೇಗೂರಿನಲ್ಲಿ ನಡೆದಿದೆ.

ತಮಿಳುನಾಡು ಮೂಲದ ಸೆಲ್ವರಾಜ್(50) ಮೃತ ಲಾರಿ ಚಾಲಕ.‌ ನಂಜನಗೂಡು ಕಡೆಯಿಂದ ಗುಂಡ್ಲುಪೇಟೆ ಕಡೆಗೆ ತೆರಳುತ್ತಿದ್ದ ವೇಳೆ ಲಾರಿ ಚಾಲಕನಿಗೆ ಹಾರ್ಟ್ ಅಟ್ಯಾಕ್ ಆಗಿದ್ದು ಸರ್ವೀಸ್ ರಸ್ತೆಯಲ್ಲಿ ನಿಂತಿದ್ದ ಗೂಡ್ಸ್ ಟೆಂಪೋಗೆ ಗುದ್ದಿ, ವಿದ್ಯುತ್ ಕಂಬಕ್ಕೂ ಡಿಕ್ಕಿ ಹೊಡೆದು ನಿಂತಿದೆ.

ಲಾರಿ ಚಾಲಕ  ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಸದ್ಯ, ಶವವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದು ಬೇಗೂರು ಪೊಲೀಸರು ಮುಂದಿನ ಕ್ರಮ‌ ಕೈಗೊಂಡಿದ್ದಾರೆ.

ಇತ್ತೀಚಿನ ಸುದ್ದಿ