ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಗೆ ಲಾರಿ ಡಿಕ್ಕಿ ಹೊಡೆದು ಪರಾರಿ!

10/11/2023
ಬೆಂಗಳೂರು: ಲಾರಿಯೊಂದು ಪಾದಚಾರಿಗೆ ಡಿಕ್ಕಿ ಹೊಡೆದ ಪರಿಣಾಮ ಪಾದಚಾರಿ ಸ್ಥಳದಲ್ಲೇ ಮೃತಪಟ್ಟ ಘಟನೆ ಬೆಂಗಳೂರು—ಹೊಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ,
ಒರಿಸ್ಸಾ ಮೂಲದ ನಿರಂಜನ್ ಎಂಬವರು ನಡೆದುಕೊಂಡು ಹೋಗುತ್ತಿದ್ದ ವೇಳೆ ಅಜಾಗರೋಕತೆಯ ಚಾಲನೆಯಿಂದ ಬಂದ ಲಾರಿ ಡಿಕ್ಕಿ ಹೊಡೆದಿದೆ. ಲಾರಿ ಡಿಕ್ಕಿ ಹೊಡೆದರೂ, ಚಾಲಕ ಲಾರಿಯನ್ನು ನಿಲ್ಲಿಸದೇ ಸ್ಥಳದಿಂದ ಪರಾರಿಯಾಗಿದ್ದಾನೆ.
ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ಹಳೆ ಚಂದಾಪುರ ಬಳಿ ಈ ದುರ್ಘಟನೆ ನಡೆದಿದೆ. ಘಟನಾ ಸ್ಥಳಕ್ಕೆ ಸೂರ್ಯ ನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹೆದ್ದಾರಿ ಅಪಘಾತದ ಹಿನ್ನೆಲೆ ಟ್ರಾಫಿಕ್ ಜಾಮ್ ಉಂಟಾಗಿತ್ತು.