ಲಾರಿ ಮತ್ತು ಖಾಸಗಿ ಬಸ್ ನಡುವೆ ಭೀಕರ ಅಪಘಾತ: ಕ್ಲೀನರ್ ನ ದಾರುಣ ಸಾವು
25/08/2022
ಧಾರವಾಡ: ಖಾಸಗಿ ಬಸ್ ಹಾಗೂ ಲಾರಿ ನಡುವೆ ನಡೆದ ಭೀಕರ ಅಪಘಾತದಲ್ಲಿ ಲಾರಿ ಕ್ಲೀನರ್ ಸಾವನ್ನಪ್ಪಿರುವ ಘಟನೆ ಧಾರವಾಡದಲ್ಲಿ ನಡೆದಿದೆ.
ಧಾರವಾಡದ ಹೊರವಲಯದ ಹಳಿಯಾಳ ಬೈಪಾಸ್ ರಸ್ತೆಯಲ್ಲಿ ಈ ಘಟನೆ ನಡೆದಿದ್ದು, ಲಾರಿ ಚಾಲಕನಿಗೆ ಗಂಭೀರ ಗಾಯವಾಗಿದ್ದು, ಕ್ಲೀನರ್ ಸಾವನ್ನಪ್ಪಿದ್ದಾರೆ.
ಘಟನೆಯಿಂದಾಗಿ ಬಸ್ ನಲ್ಲಿದ್ದ ಪ್ರಯಾಣಿಕರಿಗೂ ಸಣ್ಣಪುಟ್ಟ ಗಾಯಗಳಾಗಿವೆ ಎಂದು ತಿಳಿದು ಬಂದಿದೆ. ಘಟನಾ ಸ್ಥಳಕ್ಕೆ ಧಾರವಾಡ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ತನಿಖೆ ನಡೆಸುತ್ತಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Ginhq56yzxz2MmHFl94DFN
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

























