ಜಾನುವಾರುಗಳನ್ನು ಸಾಗಿಸುತ್ತಿದ್ದ ಲಾರಿ ಪಲ್ಟಿ: ಚಾಲಕ, ಕ್ಲೀನರ್ ಸಹಿತ 40 ಜಾನುವಾರುಗಳ ಸಾವು

07/02/2024
ಆಂಧ್ರಪ್ರದೇಶ: ಜಾನುವಾರುಗಳನ್ನು ಹೊತ್ತೊಯ್ಯುತ್ತಿದ್ದ ಲಾರಿ ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ ಲಾರಿ ಚಾಲಕ, ಕ್ಲೀನರ್ ಹಾಗೂ 40 ಜಾನುವಾರುಗಳು ಸಾವನ್ನಪ್ಪಿರುವ ಘಟನೆ ಆಂಧ್ರಪ್ರದೇಶದ ಅನಂತಪುರಂ ಜಿಲ್ಲೆಯಲ್ಲಿ ನಡೆದಿದೆ.
ಮಂಗಳವಾರ ರಾತ್ರಿ ಜಾನುವಾರುಗಳು ಹೊತ್ತೊಯ್ಯುತ್ತಿದ್ದ ಲಾರಿ ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ ಲಾರಿ ಚಾಲಕ, ಕ್ಲೀನರ್ ಹಾಗೂ ಲಾರಿಯಲ್ಲಿದ್ದ 40 ಜಾನುವಾರುಗಳು ಸ್ಧಳದಲೇ ಸಾವನ್ನಪ್ಪಿವೆ.
ಮೃತಪಟ್ಟ ಜಾನುವಾರಗಳ ಮೃತದೇಹವನ್ನು ಕ್ರೇನ್ ಬಳಸಿ ಹೊರತೆಗೆಯಲಾಯಿತು.
ಅಪಘಾತದಲ್ಲಿ ಮೃತಪಟ್ಟ ಲಾರಿ ಚಾಲಕ ಹಾಗೂ ಕ್ಲೀನರ್ ಗುರುತು ಇನ್ನೂ ಪತ್ತೆಯಾಗಿಲ್ಲ. ಘಟನಾ ಸ್ಥಳಕ್ಕೆ ಧಾವಿಸಿದ ಪೊಲೀಸರ ತಂಡ, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಸಮೀಪದ ಆಸ್ಪತ್ರೆಗೆ ಸಾಗಿಸಲಾಗಿದೆ.