ಐಷಾರಾಮಿ ಜೀವನಕ್ಕಾಗಿ ಲಾರಿ ಕಳ್ಳತನ: ಆರೋಪಿ ಅರೆಸ್ಟ್

ಬೆಂಗಳೂರು: ಐಷಾರಾಮಿ ಜೀವನಕ್ಕಾಗಿ ಲಾರಿಗಳನ್ನು ಕಳ್ಳತನ ಮಾಡಿ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ವಿವಿ ಪುರಂ ಪೊಲೀಸರು ಬಂಧಿಸಿದ್ದಾರೆ. ಬಂಧಿತನಿಂದ 1.5 ಕೋಟಿ ರೂ. ಮೌಲ್ಯದ ಮೂರು ಲಾರಿಗಳನ್ನು ವಶಪಡಿಸಿಕೊಳ್ಳಲಾಗಿದೆ.
ಬಂಧಿತ ಆರೋಪಿಯನ್ನು ತಮಿಳುನಾಡು ಮೂಲದ ಮುತ್ತುರಾಜ್ ಎಂದು ಗುರುತಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಒಂದು ಸಾವಿರಕ್ಕೂ ಅಧಿಕ ಸಿಸಿಟಿವಿಗಳನ್ನು ಪರಿಶೀಲನೆ ನಡೆಸಲಾಗಿದೆ. ಉಳಿದ ಇಬ್ಬರು ಆರೋಪಿಗಳ ಪತ್ತೆಗಾಗಿ ಹುಡುಕಾಟ ನಡೆಸಲಾಗುತ್ತಿದೆ. ಶೀಘ್ರದಲ್ಲೇ ಉಳಿದ ಆರೋಪಿಗಳನ್ನು ಬಂಧಿಸಲಾಗುವುದು.
ಆರೋಪಿ ಕದ್ದ ಲಾರಿಗಳನ್ನು ನಕಲಿ ದಾಖಲೆ ಸೃಷ್ಟಿಸಿ ಮಾರಾಟ ಮಾಡುತ್ತಿದ್ದ. ಅಲ್ಲದೇ ಕದ್ದ ಲಾರಿಗಳನ್ನು ಸ್ನೇಹಿತರ ಮೂಲಕ ಮಾರಾಟ ಮಾಡಿಸುತ್ತಿದ್ದ. ಓರ್ವ ಸ್ನೇಹಿತ ಇಂಜಿನ್ ಮತ್ತು ಚೆಸ್ಸಿ ನಂಬರ್ ಟ್ಯಾಂಪರಿಂಗ್ ಮಾಡುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/D73015iu7jn2glm2MECosd
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw