ದಿಲ್ಲಿಯಲ್ಲಿ ಅರಳಿದ ಕಮಲ: ಜನರು ಬದಲಾವಣೆ ಬಯಸಿದ್ದರು ಎಂದ ಪ್ರಿಯಾಂಕಾ ಗಾಂಧಿ - Mahanayaka
1:35 AM Saturday 13 - September 2025

ದಿಲ್ಲಿಯಲ್ಲಿ ಅರಳಿದ ಕಮಲ: ಜನರು ಬದಲಾವಣೆ ಬಯಸಿದ್ದರು ಎಂದ ಪ್ರಿಯಾಂಕಾ ಗಾಂಧಿ

08/02/2025

ದೇಶದ ಜನರ ಗಮನವನ್ನು ತನ್ನತ್ತ ಸೆಳೆದಿದ್ದ ಬಹುನಿರೀಕ್ಷಿತ ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಿದ್ದು, 27 ವರ್ಷದ ಬಳಿಕ ದೆಹಲಿಯಲ್ಲಿ ಕಮಲ ಅರಳಿದೆ. ದೆಹಲಿಯ ಜನರು ಬೇಸತ್ತು ಹೋಗಿದ್ದರು. ಅವರು ಬದಲಾವಣೆಯನ್ನು ಬಯಸಿದ್ದಾರೆ. ಗೆದ್ದವರಿಗೆಲ್ಲ ಅಭಿನಂದನೆಗಳು ಎಂದು ಕಾಂಗ್ರೆಸ್‌ನ ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ಹೇಳಿದ್ದಾರೆ.


Provided by

ಈ ಕುರಿತು ಕೇರಳದ ವಯನಾಡ್‌ನಲ್ಲಿ ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್‌ನ ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ, ರಾಷ್ಟ್ರ ರಾಜಧಾನಿಯ ಜನರು ಬದಲಾವಣೆಗಾಗಿ ಮತ ಹಾಕಿದ್ದಾರೆ ಎಂದು ತಿಳಿಸಿದ್ದಾರೆ.

ಕಾಂಗ್ರೆಸ್ ಸತತ ಮೂರನೇ ಬಾರಿಯೂ ಚುನಾವಣೆಯಲ್ಲಿ ಶೂನ್ಯ ಸಾಧನೆ ಮಾಡಿದೆ. ಈ ವಿಚಾರವಾಗಿ ಮಾತನಾಡಿದ ಪ್ರಿಯಾಂಕಾ ಗಾಂಧಿ, ನಾವು ಕಷ್ಟಪಟ್ಟು ಅವಿರತವಾಗಿ ಕೆಲಸ ಮಾಡಬೇಕು. ಜನರ ಸಮಸ್ಯೆಗಳಿಗೆ ಸ್ಪಂದಿಸುತ್ತಲೇ ಇರಬೇಕು ಎಂದಿದ್ದಾರೆ.

ಬಿಜೆಪಿ 46 ಸೀಟುಗಳಲ್ಲಿ ಗೆಲುವು ಪಡೆದುಕೊಂಡಿದೆ. ರಾಜ್ಯದಲ್ಲಿ ಸರ್ಕಾರ ರಚನೆ ಮಾಡಲು ಬೇಕಾದ ಮ್ಯಾಜಿಕ್ ನಂಬರ್ 36. ಬಿಜೆಪಿ 27 ವರ್ಷಗಳ ಬಳಿಕ ರಾಜ್ಯದಲ್ಲಿ ಅಧಿಕಾರ ನಡೆಸಲು ಸಿದ್ಧತೆ ನಡೆಸಿದೆ.
ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಗೆಲುವು ಖಚಿತವಾಗುತ್ತಿದ್ದಂತೆಯೇ, ಕಾರ್ಯಕರ್ತರು ಸಂಭ್ರಮಾಚರಣೆ ಆರಂಭಿಸಿದ್ದಾರೆ. ಹ್ಯಾಟ್ರಿಕ್ ಗೆಲುವು ಸಾಧಿಸುವ ಕನಸನ್ನ ಹೊಂದಿದ್ದ ಆಪ್‌ಗೆ ನಿರಾಸೆಯಾಗಿದ್ದು, 27 ವರ್ಷದ ಬಳಿಕ ಬಿಜೆಪಿ ಮರಳಿ ಅಧಿಕಾರದ ಗದ್ದುಗೆಗೇರುವ ಸಂಭ್ರಮದಲ್ಲಿದೆ.

 

ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/BHOOdLNNvmD17cBJslQgwj

ಇತ್ತೀಚಿನ ಸುದ್ದಿ