4:07 AM Wednesday 20 - August 2025

ಇನ್ ಸ್ಟಾಗ್ರಾಮ್ ನಲ್ಲಿ ಲವ್: ಸುತ್ತಾಡಲು ಕರೆದೊಯ್ದ ಪ್ರಿಯತಮ ಪ್ರೀತಿಯ ಕಥೆ ಮುಗಿಸಿದ!

preeti puneeth
25/06/2025

ಮಂಡ್ಯ:  ಇನ್ ಸ್ಟಾಗ್ರಾಮ್ ನಲ್ಲಿ ಶುರುವಾದ ಪರಿಚಯ ಪ್ರೀತಿಗೆ ತಿರುಗಿದ್ದು, ಜೋಡಿ ಪ್ರೀತಿ, ಪ್ರೇಮ, ಪ್ರಣಯ ಅಂತ ಸುತ್ತಾಡಿ, ಕೊನೆಗೆ  ಜಗಳ ನಡೆದು ಅಂತಿಮವಾಗಿ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಮಂಡ್ಯದಲ್ಲಿ ನಡೆದಿದೆ.

ಹಾಸನ ಜಿಲ್ಲೆಯ ಹೊಸಕೊಪ್ಪಲು ಗ್ರಾಮದ ಪ್ರೀತಿ (35) ಹತ್ಯೆಗೊಳಗಾಗಿರುವ ಮಹಿಳೆಯಾಗಿದ್ದಾರೆ. ಕರೋಟಿ ಗ್ರಾಮದ ಪುನೀತ್ ಹತ್ಯೆಗೈದ ಆರೋಪಿಯಾಗಿದ್ದಾನೆ.

ಪ್ರೀತಿಗೆ ಈಗಾಗಲೇ ಮದುವೆಯಾಗಿದ್ದು, ಗಂಡ ಹಾಗೂ ಮಕ್ಕಳಿದ್ದಾರೆ. ಆದರೂ ಪುನೀತ್ ಜೊತೆಗೆ ಲವ್ ಶುರುವಾಗಿದೆ. ಕಳೆದ ಭಾನುವಾರ ಇಬ್ಬರೂ ಮೈಸೂರಿಗೆ ಕಾರಿನಲ್ಲಿ ತೆರಳಿದ್ದರು. ಮಂಡ್ಯದ ಪ್ರವಾಸಿ ತಾಣಗಳಿಗೆ ಭೇಟಿ ನೀಡಿ ಎಂಜಾಯ್ ಮಾಡಿದ್ದರು. ಬಳಿಕ ಕೆ.ಆರ್.ಪೇಟೆ ಕತ್ತರಘಟ್ಟ ಅರಣ್ಯ ಪ್ರದೇಶದಲ್ಲಿ ಇಬ್ಬರ ನಡುವೆ ಯಾವುದೋ ಕಾರಣಕ್ಕೆ ಗಲಾಟೆ ನಡೆದಿದ್ದು, ಅಲ್ಲಿಯೇ ಮಹಿಳೆಯನ್ನು ಕೊಂದ ಪುನೀತ್ ಆಕೆಯ ಚಿನ್ನಾಭರಣಗಳನ್ನು ದೋಚಿದ್ದು, ಬಳಿಕ ತನ್ನ ಜಮೀನಿನಲ್ಲಿ ಶವ ಮುಚ್ಚಿಟ್ಟು ಪರಾರಿಯಾಗಿದ್ದ.

ಪ್ರೀತಿಯ ಮೊಬೈಲ್ ಗೆ ಬಂದಿದ್ದ ಕರೆಗಳಿಂದ ಆರೋಪಿಯು ಪೊಲೀಸರಿಗೆ  ಸಿಕ್ಕಿ ಬಿದ್ದಿದ್ದಾನೆ. ಘಟನೆ ಸಂಬಂಧ ಕಿಕ್ಕೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

ಇತ್ತೀಚಿನ ಸುದ್ದಿ

Exit mobile version