ಬಾಡಿಗೆ ಮನೆಯಲ್ಲಿ ಪ್ರಿಯತಮೆಯನ್ನು ಬರ್ಬರವಾಗಿ ಹತ್ಯೆ ಮಾಡಿದ ಪ್ರಿಯಕರ!

ದೇವನಹಳ್ಳಿ: ಯುವಕನೋರ್ವ ಚಾಕುವಿನಿಂದ ಇರಿದು ಪ್ರಿಯತಮೆಯನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆಯಲ್ಲಿ ನಡೆದಿದೆ.
ಆಂಧ್ರಪ್ರದೇಶದ ಮೂಲದ ಹೇಮಾವತಿ(35) ಮೃತಪಟ್ಟ ಮಹಿಳೆಯಾಗಿದ್ದಾಳೆ. ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ಮೂಲದ ವೇಣು ಎಂಬಾತ ಕೃತ್ಯ ಎಸಗಿದ್ದಾನೆ. ಹೊಸಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ಮಹಿಳೆಯನ್ನು ಆರೋಪಿ 4 ತಿಂಗಳ ಹಿಂದೆ ಹೊಸಕೋಟೆಯಲ್ಲಿ ಬಾಡಿಗೆ ಮನೆಯಲ್ಲಿ ಇರಿಸಿದ್ದ. ಆಕೆ ಪೆಟ್ರೋಲ್ ಬಂಕ್ ನಲ್ಲಿ ಕೆಲಸ ಮಾಡಿಕೊಂಡು ಒಬ್ಬಂಟಿಯಾಗಿದ್ದಳು. ಆರೋಪಿ ವೇಣು ಆಗಾಗ ಮನೆಗೆ ಬಂದು ಹೋಗುತ್ತಿದ್ದ. ನಿನ್ನೆ ಮನೆಗೆ ಬಂದಿದ್ದ ವೇಣು ಹತ್ಯೆ ಮಾಡಿ ಮುಂಜಾನೆ ಪರಾರಿಯಾಗಿದ್ದಾನೆ.
ನಂತರ ಚಿಂತಾಮಣಿಗೆ ಹೋಗಿ ತನ್ನ ಮನೆಯಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಸದ್ಯ ಆತನನ್ನು ಚಿಕ್ಕಬಳ್ಳಾಪುರ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಹೊಸಕೋಟೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ತನಿಖೆ ನಡೆಸುತ್ತಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth