ಸಿದ್ದರಾಮಯ್ಯ ಪರ ಬ್ಯಾಟಿಂಗ್: ಪ್ರತಾಪ್ ಸಿಂಹಗೆ ಕಾಫಿ ಕುಡಿಸುತ್ತೇನೆ ಎಂದ ಎಂ.ಲಕ್ಷಣ್ - Mahanayaka
5:19 AM Wednesday 22 - January 2025

ಸಿದ್ದರಾಮಯ್ಯ ಪರ ಬ್ಯಾಟಿಂಗ್: ಪ್ರತಾಪ್ ಸಿಂಹಗೆ ಕಾಫಿ ಕುಡಿಸುತ್ತೇನೆ ಎಂದ ಎಂ.ಲಕ್ಷಣ್

m lakshman (1)
26/12/2024

ಮೈಸೂರು: ಕೆಆರ್ ರಸ್ತೆಗೆ ಸಿದ್ದರಾಮಯ್ಯ ಹೆಸರು ಪ್ರಸ್ತಾಪಕ್ಕೆ ಮಾಜಿ ಸಂಸದ ಪ್ರತಾಪ್ ಸಿಂಹ ಪರೋಕ್ಷ ಬೆಂಬಲಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ವಕ್ತಾರ ಎಂ.ಲಕ್ಷಣ್ ಪ್ರತಿಕ್ರಿಯೆ ನೀಡಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೆಆರ್ ರಸ್ತೆಗೆ ಸಿದ್ದರಾಮಯ್ಯ ಹೆಸರು ಇಟ್ಟರೆ ತಪ್ಪೇನು ಎಂದು ಬಿಜೆಪಿ ಪಕ್ಷದ ಮಾಜಿ ಸಂಸದ ಪ್ರತಾಪ ಸಿಂಹ ಅವರೇ ಪ್ರಶ್ನಿಸಿದ್ದಾರೆ 10 ವರ್ಷಗಳ ಬಳಿಕ ನಿಜ ಹೇಳಿರುವ ಅವರನ್ನು ನಾನು ಅಭಿನಂದಿಸುತ್ತೇನೆ ಎಂದು ಅವರು ಹೇಳಿದರು.

ಪ್ರತಾಪ ಸಿಂಹ ಸಿದ್ದರಾಮಯ್ಯರನ್ನ ಕಟುವಾಗಿ ಟೀಕಿಸುತ್ತಾ ಬಂದಿದ್ದವರು. ಆದರೆ ಅಂಥವರು ನಿನ್ನೆ ಸಿಎಂ ಸಿದ್ದರಾಮಯ್ಯ ಪರವಾಗಿ ಮಾತನಾಡಿದ್ದಾರೆ. ಎಲ್ಲಾದರೂ ಭೇಟಿಯಾದರೆ ನಾನೇ ಖುದ್ದಾಗಿ ಕರೆದುಕೊಂಡು ಹೋಗಿ ಕಾಫಿ ಕುಡಿಸುತ್ತೇನೆ. ಕಾಫಿಗೆ ಮಾತ್ರ ಸೀಮಿತಗೊಳಿಸುತ್ತೇನೆ. ಅವರು ಎಷ್ಟಾದರೂ ಬಲಪಂಥೀಯ.

ಕಾಫಿ ಕೊಡಿಸುತ್ತೇನೆ ಎಂದಿರುವುದು ಅವರು ಸಿದ್ದರಾಮಯ್ಯರನ್ನ ಹೊಗಳಿರುವುದಕ್ಕಲ್ಲ, ಪ್ರತಾಪ ಸಿಂಹಗೆ ಟಿಕೆಟ್ ಕೈತಪ್ಪಿದ ಮೇಲೆ ಜ್ಞಾನೋದಯವಾಗಿದೆ. ನಾಳೆ ಇನ್ನೇನು ಹೇಳುತ್ತಾರೋ ಗೊತ್ತಿಲ್ಲ. ಬಿಜೆಪಿಯ ಹಿಡನ್ ಅಜೆಂಡಾ ಗೊತ್ತಾಗಿದ್ದಕ್ಕೆ ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದರು.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/HEkqDgrW2BlJLad5kZ1DX7

ಇತ್ತೀಚಿನ ಸುದ್ದಿ