ಮಾದಕ ವಸ್ತು ಸೇವನೆ ಪ್ರಕರಣ: ಮೂವರು ಆರೋಪಿಗಳು ಪೊಲೀಸ್ ವಶಕ್ಕೆ - Mahanayaka
10:31 PM Wednesday 18 - March 2026

ಮಾದಕ ವಸ್ತು ಸೇವನೆ ಪ್ರಕರಣ: ಮೂವರು ಆರೋಪಿಗಳು ಪೊಲೀಸ್ ವಶಕ್ಕೆ

arrest
11/09/2022

ಸಾಲಿಗ್ರಾಮದ ಪರಿಸರದಲ್ಲಿ ಮಾದಕ ವಸ್ತು ಸೇವನೆ ಪ್ರಕರಣಕ್ಕೆ ಸಂಬಂಧಿಸಿ ಮೂರು ಮಂದಿಯನ್ನು ಸೆನ್ ಅಪರಾಧ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಈ ಬಗ್ಗೆ ಖಚಿತ ಮಾಹಿತಿ ಪಡೆದ ಸೆನ್ ಅಪರಾಧ ಪೊಲೀಸರು ಸೆ.9ರಂದು ಸಾಲಿಗ್ರಾಮದ ಬಸ್ ನಿಲ್ದಾಣದ ಬಳಿಯ ಸಾರ್ವಜನಿಕ ಸ್ಥಳದಲ್ಲಿ ಗಣೇಶ್ ಉಪಾಧ್ಯಾಯ, ಆದಂ ಹಾಗೂ ತಬ್ರೇಜ್ ಎಂಬ ಮೂವರನ್ನು ಗಾಂಜಾ ಸೇವಿಸಿರುವ ಅನುಮಾನದ ಮೇರೆಗೆ ವಶಕ್ಕೆ ಪಡೆದು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ್ದರು.

ನಿನ್ನೆ ಬಂದ ಇವರ ವೈದ್ಯಕೀಯ ಪರೀಕ್ಷಾ ವರದಿಯಲ್ಲಿ ಮೂವರೂ ಗಾಂಜಾ ಸೇವಿಸಿರುವುದು ದೃಢಪಟ್ಟಿದೆ. ಈ ಹಿನ್ನೆಲೆಯಲ್ಲಿ ಉಡುಪಿ ಸೆನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಮೂವರ ವಿರುದ್ಧ ಮೂರು ಪ್ರತ್ಯೇಕ ಪ್ರಕರಣ ದಾಖಲಾಗಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Ginhq56yzxz2MmHFl94DFN

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ