ಮದ್ದೂರು ಗಲಭೆ ವಿಚಾರ: ರಾಜಕೀಯ ಉದ್ದೇಶವಿದೆಯೇ ಎಂಬ ಬಗ್ಗೆ ಪರಿಶೀಲನೆ: ಎನ್.ಚಲುವರಾಯಸ್ವಾಮಿ

ಮಂಡ್ಯ(Mandya): ಮದ್ದೂರಿನಲ್ಲಿ ನಡೆದ ಗಲಭೆಗೆ ಸಂಬಂಧಿಸಿದಂತೆ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಜರುಗಿಸಲಾಗುವುದು ಎಂದು ಕೃಷಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ತಿಳಿಸಿದ್ದಾರೆ.
ಸೋಮವಾರ ಸಂಜೆ ಮದ್ದೂರಿನ ಪ್ರವಾಸಿ ಮಂದಿರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಗಲಭೆ ನಡೆದ ತಕ್ಷಣ ಅಧಿಕಾರಿಗಳು 21 ಜನರನ್ನು ಬಂಧಿಸಿ ವಿಚಾರಣೆ ನಡೆಸಿದ್ದಾರೆ. ಪ್ರಕರಣದ ತನಿಖೆಗೆ ಐಜಿ ಹಾಗೂ 8 ಪೊಲೀಸ್ ವರಿಷ್ಠಾಧಿಕಾರಿಗಳನ್ನು ನೇಮಕ ಮಾಡಲಾಗಿದೆ. ಸಂಪೂರ್ಣ ವರದಿ ಸಿದ್ಧಪಡಿಸಿ ಶೀಘ್ರದಲ್ಲೇ ಮುಖ್ಯಮಂತ್ರಿಗಳಿಗೆ ಸಲ್ಲಿಸಲಾಗುವುದು ಎಂದು ಹೇಳಿದರು.
ಮದ್ದೂರು ಗಣಪತಿ ವಿಸರ್ಜನೆ ಕಾರ್ಯಕ್ರಮದ ವೇಳೆ ಉಂಟಾದ ಗಲಭೆಯ ಹಿಂದೆ ರಾಜಕೀಯ ಉದ್ದೇಶವಿದೆಯೋ, ಇಲ್ಲವೋ ಎಂಬುದನ್ನು ಪರಿಶೀಲಿಸಲಾಗುವುದು. ಯಾರನ್ನೂ ಓಲೈಕೆ ಮಾಡುವ ಪ್ರಶ್ನೆ ಇಲ್ಲ. ತಪ್ಪಿತಸ್ಥರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಧರ್ಮದ ಹೆಸರಿನಲ್ಲಿ ನಮ್ಮ ಸರ್ಕಾರ ರಾಜಕೀಯ ಮಾಡುವುದಿಲ್ಲ. ಧಾರ್ಮಿಕ ಸಂಘಟನೆಗಳು ಯಾವುದೇ ರಾಜಕೀಯ ಪ್ರಚೋದನೆಗೆ ಒಳಗಾಗಬಾರದು ಎಂದು ಮನವಿ ಮಾಡಿದರು.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/H1duNIQRfXnJcfQKWPzNqD