ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ  ಮದ್ಯಪಾನ ಮಾಡಿ ಪಾಠ ಮಾಡುತ್ತಿದ್ದ ಶಿಕ್ಷಕಿ

teacher
08/09/2022

ತುಮಕೂರು: ಬೆಳ್ಳಂಬೆಳಗ್ಗೆ ಮದ್ಯಪಾನ ಮಾಡಿಕೊಂಡು ಪಾಠ ಮಾಡುತ್ತಿದ್ದ ಟೀಚರ್ ಒಬ್ಬರು  ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಘಟನೆ ತುಮಕೂರು ತಾಲೂಕಿನ ಚಿಕ್ಕಸಾರಂಗಿ ಪ್ರಾಥಮಿಕ ಶಾಲೆಯಲ್ಲಿ ನಡೆದಿದೆ.

ಕಳೆದ 25 ವರ್ಷಗಳಿಂದ ಈ ಶಾಲೆಯಲ್ಲಿ ಶಿಕ್ಷಕಿ ಗಂಗಲಕ್ಷ್ಮಮ್ಮ ಸೇವೆ ಸಲ್ಲಿಸುತ್ತಿದ್ದಾರೆ. ಆದರೆ ಕಳೆದ 5 ವರ್ಷದಿಂದ ಮದ್ಯ ವ್ಯಸನಕ್ಕೆ ದಾಸರಾಗಿದ್ದರು ಎನ್ನಲಾಗಿದೆ. ವಿದ್ಯಾರ್ಥಿಗಳಿಗೆ ಕ್ಷುಲ್ಲಕ ಕಾರಣಕ್ಕೆ ಹೊಡೆಯುವುದು,  ಸಹೋದ್ಯೋಗಿಗಳ ಜೊತೆ ಜಗಳ ಮಾಡುವುದು ಮಾಡುತ್ತಿದ್ದರು ಎಂದು ತಿಳಿದು  ಬಂದಿದೆ.

ಶಿಕ್ಷಕಿಯ ವರ್ತನೆಯಿಂದ ರೋಸಿ ಹೋದ ಪೋಷಕರು ಶಾಲೆಗೆ ಬೀಗ ಹಾಕಿ ಶಿಕ್ಷಕಿ ವಿರುದ್ಧ ಕ್ರಮ ತೆಗೆದುಕೊಳ್ಳುವಂತೆ ಒತ್ತಾಯಿಸಿದ್ದಾರೆ.

ಇದೇ ವೇಳೆ ಅಧಿಕಾರಿಗಳು ಬಂದು ಪರಿಶೀಲನೆ ನಡೆಸಿದಾಗ ಶಿಕ್ಷಕಿಯ ಟೇಬಲ್ ನ  ಡ್ರಾಯರ್ ನಲ್ಲಿ ಮದ್ಯ ಪತ್ತೆಯಾಗಿದೆ ಎನ್ನಲಾಗಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Ginhq56yzxz2MmHFl94DFN

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ

Exit mobile version