ಮಗುವನ್ನು ಹಿಡಿದುಕೊಂಡಿದ್ದ ವ್ಯಕ್ತಿಯ ಮೇಲೆ ಲಾಠಿ ಚಾರ್ಜ್: ವಿಡಿಯೋ ವೈರಲ್ ಆದ ಬೆನ್ನಲ್ಲೇ ಕಠಿಣ ಕ್ರಮ - Mahanayaka
12:31 AM Tuesday 14 - October 2025

ಮಗುವನ್ನು ಹಿಡಿದುಕೊಂಡಿದ್ದ ವ್ಯಕ್ತಿಯ ಮೇಲೆ ಲಾಠಿ ಚಾರ್ಜ್: ವಿಡಿಯೋ ವೈರಲ್ ಆದ ಬೆನ್ನಲ್ಲೇ ಕಠಿಣ ಕ್ರಮ

khanpura
11/12/2021

ಕಾನ್ಪುರ: ಹೆಣ್ಣು ಮಗುವನ್ನು ಹಿಡಿದುಕೊಂಡಿದ್ದ ವ್ಯಕ್ತಿಯ ಮೇಲೆ ಪೊಲೀಸರು ಲಾಠಿ ಚಾರ್ಜ್ ನಡೆಸುತ್ತಿದ್ದ ವಿಡಿಯೋವೊಂದು ವೈರಲ್ ಆಗಿ ದೇಶಾದ್ಯಂತ ಭಾರೀ ಸುದ್ದಿಯಾಗಿತ್ತು. ಇದೀಗ ಲಾಠಿ ಚಾರ್ಜ್ ನಡೆಸಿದ ಪೊಲೀಸ್ ಅಧಿಕಾರಿಯನ್ನು ಅಮಾನತು ಮಾಡಲಾಗಿದೆ.


Provided by

ಉತ್ತರ ಪ್ರದೇಶದ ಕಾನ್ಪುರದಲ್ಲಿ ವೈದ್ಯಕೀಯ ಕಾಲೇಜು ನಿರ್ಮಿಸುವ  ಉದ್ದೇಶದಿಂದ ಮಣ್ಣ ಅಗೆದು ಜಿಲ್ಲಾಸ್ಪತ್ರೆ ಆವರಣದಲ್ಲಿ ಹಾಕಲಾಗಿತ್ತು. ಇದರ ಬಗ್ಗೆ ದೂರು ನೀಡಿದರೂ ಪೊಲೀಸರು ಯಾವುದೇ ಕ್ರಮಕೈಗೊಂಡಿರಲಿಲ್ಲ. ಹೀಗಾಗಿ ಪೊಲೀಸ್ ಅಧಿಕಾರಿಗಳ ವಿರುದ್ಧ ಆಸ್ಪತ್ರೆ ಸಿಬ್ಬಂದಿ ಪ್ರತಿಭಟನೆ ನಡೆಸಿದ್ದರು.

ಸ್ಥಳಕ್ಕೆ ಆಗಮಿಸಿದ ಪೊಲೀಸರು ನ್ಯಾಯ ಪಾಲಿಸುವುದು ಬಿಟ್ಟು, ಪ್ರತಿಭಟನಾಕಾರರ ಮೇಲೆ ಲಾಠಿ ಚಾರ್ಜ್ ನಡೆಸಿದ್ದಾರೆ. ಲಾಠಿ ಚಾರ್ಜ್ ವೇಳೆ ಇತರ ಸಿಬ್ಬಂದಿ ತಪ್ಪಿಸಿಕೊಂಡಿದ್ದು, ವಾರ್ಡ್ ಬಾಯ್ ರಜನೀಶ್ ಎಂಬವರ ಸಹೋದರ ಪುನೀತ್ ಪೊಲೀಸರಿಗೆ ಸಿಕ್ಕಿ ಬಿದ್ದಿದ್ದಾರೆ. ಈ ವೇಳೆ ಅವರ ಕೈಯಲ್ಲಿ ಮಗು ಇದ್ದರೂ, ಲೆಕ್ಕಿಸದ ಪೊಲೀಸರು ಲಾಠಿಯಿಂದ ಹಿಗ್ಗಾಮುಗ್ಗಾ ಥಳಿಸಿ, ಮಗುವನ್ನು ಕೈಯಿಂದ ಕಿತ್ತುಕೊಳ್ಳಲು ಯತ್ನಿಸಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಅಕ್ಬರ್ ಪುರ ಪೊಲೀಸ್ ಠಾಣೆಯ ಎಸ್ ಹೆಚ್ ಒ ವಿನೋದ್ ಕುಮಾರ್ ಅವರನ್ನು ಕರ್ತವ್ಯದಿಂದ ಅಮಾನತುಗೊಳಿಸಿದ್ದಾರೆ. ಉತ್ತರ ಪ್ರದೇಶದಲ್ಲಿ ನಡೆಯುತ್ತಿರುವ ಭಯಾನಕ ಘಟನೆಗಳಲ್ಲಿ ಇದು ಕೂಡ ಒಂದಾಗಿದ್ದು, ಇಲ್ಲಿ ಮನುಷ್ಯತ್ವಕ್ಕೆ ಬೆಲೆಯೇ ಇಲ್ಲವೇ ಎಂದು ಘಟನೆಯ ವಿಡಿಯೋ ನೋಡಿದ ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಸಿಎಂ ಸ್ಥಾನದಿಂದ ಇಳಿಯುತ್ತಾರಾ ಬಸವರಾಜ್ ಬೊಮ್ಮಾಯಿ? | ಬಲವಾಗಿ ಕೇಳಿ ಬರುತ್ತಿರುವ ಚರ್ಚೆಗಳೇನು ಗೊತ್ತಾ?

ಕೇರಳದಲ್ಲಿ ಮತ್ತೆ ಹಕ್ಕಿ ಜ್ವರ ಪತ್ತೆ: ಕೋಳಿ, ಬಾತುಕೋಳಿ, ಮೊಟ್ಟೆಗಳನ್ನು ನಾಶಪಡಿಸಲು ಆದೇಶ

ಪೂಜೆಯ ನೆಪದಲ್ಲಿ ಅನಾರೋಗ್ಯ ಪೀಡಿತ ಮಹಿಳೆಯ ತಲೆಗೆ ಹೊಡೆದ ಪೂಜಾರಿ: ಮಹಿಳೆಯ ದಾರುಣ ಸಾವು

1 ಲೀಟರ್ ಕತ್ತೆಯ ಹಾಲಿಗೆ 10 ಸಾವಿರ ರೂಪಾಯಿ! | ಒಂದು ಚಮಚ ಕತ್ತೆಯ ಹಾಲಿಗೆ 100 ರೂಪಾಯಿ!

ವಿಶ್ವ ಮಾನವ ಹಕ್ಕುಗಳ ದಿನಾಚರಣೆ | ಸಂತ್ರಸ್ತರ ಪಾಲಿನ ಆಶಾಕಿರಣ ‘ಸಿಕ್ರಂ’: ಡಾ.ದೇವರಾಜು.ಎಸ್.ಎಸ್. 

ವಾಹನ ಇನ್ಸೂರೆನ್ಸ್ ನೆಪದಲ್ಲಿ ಕರೆದು ಶ್ರೀರಾಮಸೇನೆಯ ಕಾರ್ಯಕರ್ತನಿಗೆ ಹಲ್ಲೆ

ಇತ್ತೀಚಿನ ಸುದ್ದಿ