12:50 PM Thursday 16 - October 2025

ನರ್ಸ್ ಗೆಟಪ್ ನಲ್ಲಿ ಬಂದು ಮಗುವನ್ನು ಕದ್ದೊಯ್ದ ಮಹಿಳೆ

kerala
08/01/2022

ಕೊಟ್ಟಾಯಂ: ಆಸ್ಪತ್ರೆಯಿಂದ ನವಜಾತ ಶಿಶುವನ್ನು ಕಳವು ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಘಟನೆ ನಡೆದು ಒಂದು ಗಂಟೆಯೊಳಗೆ  ಆರೋಪಿಯನ್ನು ಕೇರಳ ಪೊಲೀಸರು ಬಂಧಿಸಿದ್ದಾರೆ.

ಕೊಟ್ಟಾಯಂನ ವೈದ್ಯಕೀಯ ಕಾಲೇಜು ಆಸ್ಪತ್ರೆಯ ಹೆರಿಗೆ ವಾರ್ಡ್‌ಗೆ ನರ್ಸ್ ನ ಗೆಟಪ್ ನಲ್ಲಿ ಬಂದಿದ್ದ  ಆರೋಪಿ ಮಹಿಳೆ, ಮಗುವಿಗೆ ಕಾಮಾಲೆ ಇದೆ ಫೋಟೋ ಥೆರಫಿ ಮಾಡಬೇಕು ಎಂದು ಹೇಳಿ ಮಗುವನ್ನು ಎತ್ತಿಕೊಂಡು ಹೋಗಿದ್ದು, ಆಸ್ಪತ್ರೆಯಿಂದ ಪರಾರಿಯಾಗಿದ್ದಳು.

ನರ್ಸ್ ಹೋಗಿ ಅರ್ಧ ಗಂಟೆಯಾದರೂ ಮಗು ಪತ್ತೆಯಾಗದ ಹಿನ್ನೆಲೆಯಲ್ಲಿ  ಬೆದರಿದ ಪೋಷಕರು ಆಸ್ಪತ್ರೆ ಸಿಬ್ಬಂದಿ ಬಳಿಯಲ್ಲಿ ವಿಚಾರಿಸಿದಾಗ ಮಗು ಕಳವಾಗಿರುವುದು ಬೆಳಕಿಗೆ ಬಂದಿದ್ದು, ತಕ್ಷಣವೇ ಆಸ್ಪತ್ರೆ ಸಿಬ್ಬಂದಿ ಹಾಗೂ ಮಗುವಿನ ಪೋಷಕರು ಪೊಲೀಸರಿಗೆ ದೂರು ನೀಡಿದ್ದಾರೆ.

ಮಗು ಕಳವಾಗಿರುವ ವಿಚಾರ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಆಗಮಿಸಿದ ಪೊಲೀಸರು ಸಿಸಿ ಟಿವಿ ದೃಶ್ಯಾವಳಿ ಸೇರಿದಂತೆ ಹಲವು ಸಾಕ್ಷಿಗಳನ್ನು ಸಂಗ್ರಹಿಸಿದ್ದು, ಬಳಿಕ ಆಸ್ಪತ್ರೆಯ ಸಮೀಪವೇ ಇದ್ದ ಹೊಟೇಲ್ ನಲ್ಲಿ ಮಹಿಳೆಯನ್ನು ಬಂಧಿಸಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

31ನೇ ವಯಸ್ಸಿನಲ್ಲೇ ನಿಗೂಢವಾಗಿ ಸಾವನ್ನಪ್ಪಿದ ನಟಿ: ಅಭಿಮಾನಿಗಳಿಗೆ ಶಾಕ್

ಮಾಜಿ ಸಿಎಂ ಇದ್ದ ವೇದಿಕೆಗೆ ಕೇಸರಿ ಶಾಲು ಧರಿಸಿ, ಚಾಕು ಹಿಡಿದು ನುಗ್ಗಿದ ಮಾನಸಿಕ ಅಸ್ವಸ್ಥ!

ಕೊರಗಜ್ಜನ ವೇಷ ಧರಿಸಿ ಅವಮಾನ:  ವ್ಯಾಪಕ ಖಂಡನೆ

ಕರ್ಫ್ಯೂ ನಡುವೆಯೇ ತೆರೆದ ಬಿಜೆಪಿ ಶಾಸಕರ ಒಡೆತನದ ಶಾಲೆ!

ನಟಿಗೆ ಕೊವಿಡ್ ಪಾಸಿಟಿವ್: ಸತ್ತು ಹೋಗಲು ಬೇಡಿದ ವಿಕೃತರು

ಇತ್ತೀಚಿನ ಸುದ್ದಿ

Exit mobile version