4 ವರ್ಷ ವಯಸ್ಸಿನ ಮಗುವಿನ  ಮೇಲೆ ಲೈಂಗಿಕ ದೌರ್ಜನ್ಯ:  ಯುವಕನ ಬಂಧನ - Mahanayaka

4 ವರ್ಷ ವಯಸ್ಸಿನ ಮಗುವಿನ  ಮೇಲೆ ಲೈಂಗಿಕ ದೌರ್ಜನ್ಯ:  ಯುವಕನ ಬಂಧನ

vignesh bhandari
08/06/2021


Provided by

ಬೆಳ್ತಂಗಡಿ:  ನಾಲ್ಕು ವರ್ಷ ವಯಸ್ಸಿನ ಮಗುವಿನ ಮೇಲೆ ಯುವಕನೋರ್ವ ಲೈಂಗಿಕ ದೌರ್ಜನ್ಯ ನಡೆಸಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕಕ್ಕಿಂಜೆ ಎಂಬಲ್ಲಿ ನಡೆದಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಕಕ್ಕಿಂಜೆಯ ಕತ್ತರಿಗುಡ್ಡೆ ನಿವಾಸಿ ವಿಘ್ನೇಶ್ ಭಂಡಾರಿ ಬಂಧಿತ ಆರೋಪಿಯಾಗಿದ್ದು,  ನಾಲ್ಕು ವರ್ಷ ವಯಸ್ಸಿನ ಬಾಲಕಿಯನ್ನು ತನ್ನ ಮನೆಗೆ ಕರೆದೊಯ್ದು ನಗ್ನ ಚಿತ್ರಗಳನ್ನು ತೋರಿಸಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು  ಬಾಲಕಿಯ ಪೋಷಕರು ಘಟನೆ ಸಂಬಂಧ ಪೊಲೀಸರಿಗೆ ದೂರು ನೀಡಿದ್ದು, ಈ ದೂರಿನನ್ವಯ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ಬಂಧಿತ ಆರೋಪಿ ವಿಘ್ನೇಶ್ ವಿರುದ್ಧ ಧರ್ಮಸ್ಥಳ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಇತ್ತೀಚಿನ ಸುದ್ದಿ