ಮಾದಪ್ಪನ ಬೆಟ್ಟದಲ್ಲಿ ಭಕ್ತಸಾಗರ: ಸಾಲೂರು ಮಠದಲ್ಲಿ ಸಹಸ್ರಾರು ಮಂದಿಗೆ ಮುದ್ದೆ-ಬಸ್ಸಾರು ಪ್ರಸಾದ!! - Mahanayaka

ಮಾದಪ್ಪನ ಬೆಟ್ಟದಲ್ಲಿ ಭಕ್ತಸಾಗರ: ಸಾಲೂರು ಮಠದಲ್ಲಿ ಸಹಸ್ರಾರು ಮಂದಿಗೆ ಮುದ್ದೆ–ಬಸ್ಸಾರು ಪ್ರಸಾದ!!

madappa
18/02/2023

ಚಾಮರಾಜನಗರ: ಮಹಾಶಿವರಾತ್ರಿ ಹಿನ್ನೆಲೆಯಲ್ಲಿ ಪ್ರಸಿದ್ಧ ಯಾತ್ರಾಸ್ಥಳವಾದ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟಕ್ಕೆ ಲಕ್ಷಾಂತರ ಮಂದಿ ಆಗಮಿಸಿ ದೇವರ ದರ್ಶನ ಪಡೆಯುತ್ತಿದ್ದಾರೆ.

ಮಲೆಮಹದೇಶ್ವರ ದೇವಾಲಯದ ಪ್ರಾಂಗಣಕ್ಕೆ ಫಲ ಹಾಗೂ ತರಕಾರಿ ಅಲಂಕಾರ ಮಾಡಿರುವುದು ಗಮನ ಸೆಳೆಯುತ್ತಿದೆ. ಬೆಟ್ಟಕ್ಕೆ ಬರುವ ಭಕ್ತರಿಗೆ ಸಾಲೂರು ಮಠವು ಮುದ್ದೆ, ಬಸ್ಸಾರು, ಹುರುಳಿಕಾಳನ್ನು ಪ್ರಸಾದವಾಗಿ ವಿತರಿಸಲಾಗುತ್ತಿದ್ದು ಸಾಲೂರು ಶ್ರೀಗಳೇ ಮುದ್ದೆ ಕಟ್ಟಿ ಕಾರ್ಯಕ್ಕೆ ಚಾಲನೆ ಕೊಟ್ಟಿದ್ದಾರೆ.

ಈಗಾಗಲೇ 30  ಸಾವಿರ ಮಂದಿ ಪ್ರಸಾದ ಸೇವಿಸಿದ್ದು 50 ಸಾವಿರ ಮಂದಿಗೆ ಮುದ್ದೆ ಪ್ರಸಾದ ತಯಾರಿಸಲಾಗುತ್ತಿದೆ. ಇದರೊಟ್ಟಿಗೆ, ಪ್ರಾಧಿಕಾರದಿಂದಲೂ ನಿರಂತರ ದಾಸೋಹ ವ್ಯವಸ್ಥೆ ಕಲ್ಪಿಸಲಾಗಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1J7NYrbnAi7fQ7rqJsLYg

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ