ಮನಿ ಲಾಂಡರಿಂಗ್ ಪ್ರಕರಣ: ದುಬೈನಲ್ಲಿ ಮಹಾದೇವ್ ಆನ್‌ಲೈನ್ ಬೆಟ್ಟಿಂಗ್ ಆ್ಯಪ್‌ನ ಮಾಲೀಕ ಅರೆಸ್ಟ್ - Mahanayaka
12:00 AM Thursday 23 - October 2025

ಮನಿ ಲಾಂಡರಿಂಗ್ ಪ್ರಕರಣ: ದುಬೈನಲ್ಲಿ ಮಹಾದೇವ್ ಆನ್‌ಲೈನ್ ಬೆಟ್ಟಿಂಗ್ ಆ್ಯಪ್‌ನ ಮಾಲೀಕ ಅರೆಸ್ಟ್

13/12/2023

ಮಹಾದೇವ್ ಆನ್‌ಲೈನ್ ಬೆಟ್ಟಿಂಗ್ ಆ್ಯಪ್‌ನ ಇಬ್ಬರು ಪ್ರಮುಖ ಮಾಲೀಕರಲ್ಲಿ ಒಬ್ಬರಾದ ರವಿ ಉಪ್ಪಲ್ ನನ್ನು ಇಡಿ ಆದೇಶದ ಮೇರೆಗೆ ಇಂಟರ್‌ಪೋಲ್ ಹೊರಡಿಸಿದ ರೆಡ್ ನೋಟಿಸ್ ಆಧಾರದ ಮೇಲೆ ಪೊಲೀಸರು ದುಬೈನಲ್ಲಿ ಬಂಧಿಸಿದ್ದಾರೆ.

43 ವರ್ಷದ ಉಪ್ಪಲನನ್ನು ಕಳೆದ ವಾರ ದುಬೈ ದೇಶದಲ್ಲಿ ಬಂಧಿಸಲಾಗಿತ್ತು. ಆತನನ್ನು ಭಾರತಕ್ಕೆ ಗಡೀಪಾರು ಮಾಡಲು ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ದುಬೈ ಅಧಿಕಾರಿಗಳೊಂದಿಗೆ ಸಂಪರ್ಕದಲ್ಲಿದ್ದಾರೆ.
ಛತ್ತೀಸ್‌ಗಢ ಪೊಲೀಸರು ಮತ್ತು ಮುಂಬೈ ಪೊಲೀಸರನ್ನು ಹೊರತುಪಡಿಸಿ ಅಕ್ರಮ ಬೆಟ್ಟಿಂಗ್‌ಗೆ ಸಂಬಂಧಿಸಿದ ಮನಿ ಲಾಂಡರಿಂಗ್ ಪ್ರಕರಣದಲ್ಲಿ ಉಪ್ಪಲ್ ನನ್ನು ಇಡಿ ತನಿಖೆ ನಡೆಸುತ್ತಿದೆ.

ಫೆಡರಲ್ ತನಿಖಾ ಸಂಸ್ಥೆಯು ಉಪ್ಪಲ್ ಮತ್ತು ಇಂಟರ್ನೆಟ್ ಆಧಾರಿತ ಪ್ಲಾಟ್‌ಫಾರ್ಮ್‌ನ ಇನ್ನೊಬ್ಬ ಆರೋಪಿ ಸೌರಭ್ ಚಂದ್ರಕರ್ ವಿರುದ್ಧ ಛತ್ತೀಸ್‌ಗಢದ ರಾಯ್‌ಪುರದ ವಿಶೇಷ ಪ್ರಿವೆನ್ಶನ್ ಆಫ್ ಮನಿ ಲಾಂಡರಿಂಗ್ ಆಕ್ಟ್(ಪಿಎಂಎಲ್‌ಎ) ನ್ಯಾಯಾಲಯದ ಮುಂದೆ ಅಕ್ಟೋಬರ್‌ನಲ್ಲಿ ಮನಿ ಲಾಂಡರಿಂಗ್ ಚಾರ್ಜ್ ಶೀಟ್ ಸಲ್ಲಿಸಿತ್ತು.

ಇತ್ತೀಚಿನ ಸುದ್ದಿ