6:58 PM Saturday 18 - October 2025

‘ಮಹಾನಾಯಕ’ ಬ್ಯಾನರ್ ಹರಿದ ಕಿಡಿಗೇಡಿಗಳು | ತಕ್ಕ ಉತ್ತರ ನೀಡುತ್ತೇವೆ: DSS ಎಚ್ಚರಿಕೆ

mahanayaka
04/04/2021

ತುರುವೇಕೆರೆ: ‘ಮಹಾನಾಯಕ’ ಡಾ.ಬಿ.ಆರ್.ಅಂಬೇಡ್ಕರ್ ಅವರ ಧಾರಾವಾಹಿಯ ಫ್ಲೆಕ್ಸ್‌ ನ್ನು ಮನುವಾದಿಗಳು ಹರಿದು ಹಾಕಿದ ಘಟನೆ ತಾಲ್ಲೂಕಿನ ದಂಡಿನಶಿವರ ಹೋಬಳಿಯ ಡಿ. ಕಲ್ಕೆರೆ ಗ್ರಾಮದಲ್ಲಿ ನಡೆದಿದಿದ್ದು, ಈ ಘಟನೆಯ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.

ಸಂವಿಧಾನ ಶಿಲ್ಪಿ ಅಂಬೇಡ್ಕರ್ ಜೀವನ ಚರಿತ್ರೆ ಕುರಿತಾದ ‘ಮಹಾನಾಯಕ’ ಧಾರಾವಾಹಿಗೆ ಶುಭಾಶಯ ಕೋರಿ ಗ್ರಾಮದಲ್ಲಿ ಫ್ಲೆಕ್ಸ್‌ ಅಳವಡಿಸಲಾಗಿತ್ತು. ಸೋಮವಾರ ರಾತ್ರಿ ಕಿಡಿಗೇಡಿಗಳು ಹರಿದು ಹಾಕಿದ್ದಾರೆ ಎಂದು ದಸಂಸ ಕೋಶಾಧಿಕಾರಿ ಡಾ.ಕೆ.ಟಿ. ಶ್ರೀನಿವಾಸ್ ತಿಳಿಸಿದ್ದಾರೆ.

ಈ ಘಟನೆಯಿಂದಾಗಿ ಅಂಬೇಡ್ಕರ್ ವಾದಿಗಳ ಭಾವನೆಗೆ ಧಕ್ಕೆ ಉಂಟಾಗಿದೆ. ದಲಿತರ ಸ್ವಾಭಿಮಾನವನ್ನು ಕೆಣಕಿರುವ ಕಿಡಿಗೇಡಿಗಳಿಗೆ ತಕ್ಕ ಉತ್ತರ ನೀಡಲು ದಸಂಸ ಸಿದ್ಧವಿದೆ ಎಂದು ಎಚ್ಚರಿಸಿದರು.

ತಾಲ್ಲೂಕು ದಸಂಸ ಸಂಚಾಲಕ ದಂಡಿನಶಿವರ ಕುಮಾರ್ ಮಾತನಾಡಿ, ದಲಿತರ ಭಾವನೆಗಳನ್ನು ಕೆಣಕುವ ಕೃತ್ಯಗಳು ತೆರೆಮರೆಯಲ್ಲಿ ನಡೆಯುತ್ತಿವೆ. ಇಂತಹ ಕಿಡಿಗೇಡಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಬೇಕಾದ ಅಗತ್ಯವಿದೆ. ತಾಂತ್ರಿಕತೆಯಲ್ಲಿ ಪ್ರಗತಿ ಸಾಧಿಸಿರುವ ಈ ದಿನಗಳಲ್ಲಿ ಪೊಲೀಸರು ಕಿಡಿಗೇಡಿಗಳನ್ನು ಪತ್ತೆ ಹಚ್ಚುವ ಮೂಲಕ ಕಾರ್ಯದಕ್ಷತೆ ಪ್ರದರ್ಶಿಸಬೇಕು. ಇಲ್ಲವಾದರೆ ಹೋರಾಟದ ಹಾದಿ ಹಿಡಿಯಬೇಕಾಗುತ್ತದೆ ಎಂದು ಎಚ್ಚರಿಸಿದರು.

ಇತ್ತೀಚಿನ ಸುದ್ದಿ

Exit mobile version