ಭೀಕರ ಅಪಘಾತ: ಐವರು ಸ್ಥಳದಲ್ಲೇ ಸಾವು, ಮೂವರ ಸ್ಥಿತಿ ಗಂಭೀರ
ಮುಂಬೈ : ಭೀಕರ ರಸ್ತೆ ಅಪಘಾತವೊಂದರಲ್ಲಿ ಐವರು ಸ್ಥಳದಲ್ಲೇ ಸಾವನ್ನಪ್ಪಿ, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಮುಂಬೈ-ಪುಣೆ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
ಮಹಾರಾಷ್ಟ್ರದ ಖೋಪೋಲಿ ಪ್ರದೇಶದ ಬಳಿ ಮುಂಬೈ ಪುಣೆ ಎಕ್ಸ್ಪ್ರೆಸ್ ವೇಯಲ್ಲಿ ಇಂದು ಬೆಳಿಗ್ಗೆ ಕಾರೊಂದು ಮತ್ತೊಂದು ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಈ ದುರಂತ ಸಂಭವಿಸಿದೆ.
ಐವರು ಮೃತರ ಪೈಕಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಒಬ್ಬರು ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಸಾವನ್ನಪ್ಪಿದ್ದಾರೆ. ಗಾಯಾಳುಗಳನ್ನು ಕಾಮೋಥೆಯ ಎಂಜಿಎಂ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka