ಮಸೀದಿಯೊಂದರ ಗೋಡೆಯ ಮೇಲೆ ಜೈ ಶ್ರೀ ರಾಮ್ ಬರಹ ಪ್ರತ್ಯಕ್ಷ: ಮುಸ್ಲಿಮರಿಂದ ಪ್ರತಿಭಟನೆ

ಮಹಾರಾಷ್ಟ್ರದ ಬೀಡ್ ಜಿಲ್ಲೆಯ ಪ್ರಮುಖ ಮಸೀದಿಯೊಂದರ ಗೋಡೆಯ ಮೇಲೆ ಜೈ ಶ್ರೀ ರಾಮ್ ಎಂದು ಬರಹ ಕಂಡು ಬಂದಿದೆ. ಸ್ಥಳೀಯ ಮುಸ್ಲಿಮರ ಗುಂಪು ಸೇರಿ ಮಸೀದಿ ಎದುರು ಮತ್ತು ಠಾಣೆಯ ಎದುರು ಪ್ರತಿಭಟನೆ ನಡೆಸಿದ್ದಾರೆ. ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.
ಮಜಲ್ ಗಾಂವ್ ನ ಮರ್ಕಾಝಿ ಮಸೀದಿಯ ಗೋಡೆಯ ಮೇಲೆ ಸಂಜೆ ವೇಳೆ ಘೋಷಣೆಗಳನ್ನು ಬರೆಯಲಾಗಿದೆ. ಸಂಜೆ 5 ಗಂಟೆಯ ಸುಮಾರಿಗೆ ಕೆಲ ಕಿಡಿಗೇಡಿಗಳು ಮಸೀದಿಯ ಗೋಡೆಯ ಮೇಲೆ ಶ್ರೀರಾಮ ಎಂದು ಬರೆದಿದ್ದಾರೆ. ಭಾರತೀಯ ದಂಡಸಂಹಿತೆ ಸೆಕ್ಷನ್ 295ರ ಅನ್ವಯ ಪ್ರಾರ್ಥನಾ ಸ್ಥಳವನ್ನು ಉದ್ದೇಶಪೂರ್ವಕವಾಗಿ ವಿರೂಪಗೊಳಿಸಿದ ಆರೋಪದಲ್ಲಿ ಪ್ರಕರಣ ದಾಖಲಿಸಲಾಗಿದೆ. ಕಿಡಿಗೇಡಿಗಳ ಜಾಡು ಹಿಡಿಯಲಾಗಿದ್ದು, ಶೀಘ್ರವೇ ಅವರನ್ನು ಬಂಧಿಸುವ ವಿಶ್ವಾಸವಿದೆ ಎಂದು ಮಜಲ್ ಗಾಂವ್ ಉಪವಿಭಾಗ ಪೊಲೀಸ್ ಅಧಿಕಾರಿ ಧೀರಜ್ ಕುಮಾರ್ ಹೇಳಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth