ಮಹಾರಾಷ್ಟ್ರ&ಜಾರ್ಖಂಡ್ ನಲ್ಲಿ ಮತದಾನ ಆರಂಭ: ಮತದಾರರ ‘ವಿಜಯದ ಮಾಲೆ’ ಯಾರಿಗೆ?
ಮಹಾರಾಷ್ಟ್ರ ಮತ್ತು ಜಾರ್ಖಂಡ್ ನಲ್ಲಿ ಆಡಳಿತ ಮತ್ತು ಪ್ರತಿಪಕ್ಷಗಳ ರಾಜಕೀಯ ಮೈತ್ರಿಗಳ ಭವಿಷ್ಯವನ್ನು ನಿರ್ಧರಿಸುವ ವಿಧಾನಸಭಾ ಚುನಾವಣೆಗೆ ಇಂದು ಮತದಾನ ಆರಂಭವಾಗಿದೆ. ಜಾರ್ಖಂಡ್ ನಲ್ಲಿ ಇಂದು ಎರಡನೇ ಮತ್ತು ಅಂತಿಮ ಹಂತದ ಮತದಾನ ನಡೆಯುತ್ತಿದ್ದರೆ, ಮಹಾರಾಷ್ಟ್ರದಲ್ಲಿ ಒಂದೇ ಹಂತದಲ್ಲಿ ಮತದಾನ ನಡೆಯುತ್ತಿದೆ.
ಎರಡೂ ರಾಜ್ಯಗಳಲ್ಲಿ ಬೆಳಿಗ್ಗೆ 7 ಗಂಟೆಗೆ ಮತದಾನ ಪ್ರಾರಂಭವಾಯಿತು. ಮಹಾರಾಷ್ಟ್ರದಲ್ಲಿ ಸಂಜೆ 6 ಗಂಟೆಗೆ ಮತ್ತು ಜಾರ್ಖಂಡ್‌ನಲ್ಲಿ ಸಂಜೆ 5 ಗಂಟೆಗೆ ಕೊನೆಗೊಳ್ಳಲಿದ್ದು, 31 ಬೂತ್ಗಳನ್ನು ಹೊರತುಪಡಿಸಿ ಸಂಜೆ 4 ಗಂಟೆಗೆ ಮುಕ್ತಾಯಗೊಳ್ಳಲಿದೆ.
ಬೆಳಿಗ್ಗೆ 9 ಗಂಟೆಯ ವೇಳೆಗೆ ಮಹಾರಾಷ್ಟ್ರದಲ್ಲಿ ಶೇಕಡಾ 6.61 ರಷ್ಟು ಮತದಾನವಾಗಿದ್ದರೆ, ಜಾರ್ಖಂಡ್ ನಲ್ಲಿ ಶೇಕಡಾ 12.71 ರಷ್ಟು ಮತದಾನವಾಗಿದೆ.
ಪ್ರಧಾನಿ ನರೇಂದ್ರ ಮೋದಿ ಅವರು ಎರಡೂ ರಾಜ್ಯಗಳ ಮತದಾರರಿಗೆ, ವಿಶೇಷವಾಗಿ ಮಹಿಳೆಯರು ಮತ್ತು ಯುವಜನರಿಗೆ ತಮ್ಮ ಮತದಾನದ ಹಕ್ಕನ್ನು ಚಲಾಯಿಸುವಂತೆ ಮನವಿ ಮಾಡಿದ್ದಾರೆ.
ಮಹಾರಾಷ್ಟ್ರದ 288 ಕ್ಷೇತ್ರಗಳಲ್ಲಿ ಒಟ್ಟು 4,136 ಅಭ್ಯರ್ಥಿಗಳು ಸ್ಪರ್ಧಿಸುತ್ತಿದ್ದಾರೆ. ಆಡಳಿತಾರೂಢ ಮಹಾಯುತಿ ಮೈತ್ರಿಕೂಟದ ಭಾಗವಾಗಿ, ಬಿಜೆಪಿ 149 ಸ್ಥಾನಗಳಲ್ಲಿ, ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆ 81 ಸ್ಥಾನಗಳಲ್ಲಿ ಮತ್ತು ಅಜಿತ್ ಪವಾರ್ ನೇತೃತ್ವದ ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷ (ಎನ್ಸಿಪಿ) 59 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ.
ಪ್ರತಿಪಕ್ಷ ಮಹಾ ವಿಕಾಸ್ ಅಘಾಡಿ ಮೈತ್ರಿಕೂಟದಲ್ಲಿ ಕಾಂಗ್ರೆಸ್ 101, ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ) 95 ಮತ್ತು ಎನ್ಸಿಪಿ (ಶರದ್ ಪವಾರ್) 86 ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/BHOOdLNNvmD17cBJslQgwj