2:24 AM Saturday 10 - January 2026

ಮಹೇಶ್ ಶೆಟ್ಟಿ ತಿಮರೋಡಿ ಒಂದು ವರ್ಷಗಳ ಕಾಲ ಗಡಿಪಾರು!

mahesh shetty timarodi
23/09/2025

ಬೆಳ್ತಂಗಡಿ: ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು  ಗಡಿಪಾರು ಮಾಡಿ ಪುತ್ತೂರು ಸಹಾಯಕ ಆಯುಕ್ತ(ಎಸಿ) ಸ್ಟೆಲ್ಲಾ ವರ್ಗೀಸ್  ಆದೇಶ ಹೊರಡಿಸಿದ್ದಾರೆ.

ಮಹೇಶ್ ಶೆಟ್ಟಿ ತಿಮರೋಡಿ ಅವರ ವಿರುದ್ಧ 32 ಪ್ರಕರಣಗಳು ವಿವಿಧ ಠಾಣೆಗಳಲ್ಲಿ ದಾಖಲಾಗಿರುವ ಹಿನ್ನೆಲೆ ಬೆಳ್ತಂಗಡಿ ಪೊಲೀಸರು ಸಲ್ಲಿಸಿರುವ ಕೋರಿಕೆಯನ್ನು ಮನ್ನಿಸಿ ಈ ಕ್ರಮಕೈಗೊಳ್ಳಲಾಗಿದೆ ಅಂತ ವರದಿಯಾಗಿದೆ.

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ 1 ವರ್ಷಗಳ ಅವಧಿಗೆ ಗಡಿಪಾರು ಮಾಡಿ ಆದೇಶ ಮಾಡಲಾಗಿದೆ ಎಂದು ತಿಳಿದು ಬಂದಿದೆ.  ಆದೇಶದ ಪ್ರತಿ ಬಂಟ್ವಾಳ ಉಪ ವಿಭಾಗದ ಡಿವೈಎಸ್ ಪಿ ಅವರಿಗೆ ಬಂದ ಬಳಿಕ ಕಾನೂನು ಕ್ರಮಕೈಗೊಳ್ಳಲಿದ್ದಾರೆ ಎಂದು ಹೇಳಲಾಗಿದೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

ಇತ್ತೀಚಿನ ಸುದ್ದಿ

Exit mobile version