ಪೊಲೀಸರೊಂದಿಗೆ ತೆರಳಿದ ಮಹೇಶ್ ಶೆಟ್ಟಿ ತಿಮರೋಡಿ: ನನ್ನ ಜೀವಕ್ಕೇನಾದ್ರು ಆದ್ರೆ ರಾಜ್ಯ ಸರ್ಕಾರವೇ ಹೊಣೆ ಎಂದ ತಿಮರೋಡಿ - Mahanayaka

ಪೊಲೀಸರೊಂದಿಗೆ ತೆರಳಿದ ಮಹೇಶ್ ಶೆಟ್ಟಿ ತಿಮರೋಡಿ: ನನ್ನ ಜೀವಕ್ಕೇನಾದ್ರು ಆದ್ರೆ ರಾಜ್ಯ ಸರ್ಕಾರವೇ ಹೊಣೆ ಎಂದ ತಿಮರೋಡಿ

mahesh shetty timarodi
21/08/2025


Provided by

ಬೆಳ್ತಂಗಡಿ:  ಮಹೇಶ್ ಶೆಟ್ಟಿ ತಿಮರೋಡಿ ನಿವಾಸದ ಮುಂದೆ ಪೊಲೀಸ್ ದಂಡು ನೆರೆದಿರುವ ಘಟನೆಗೆ ಸಂಬಂಧಿಸಿದಂತೆ ಇದೀಗ ಮಹೇಶ್ ಶೆಟ್ಟಿ ತಿಮರೋಡಿ ಅವರು ಬ್ರಹ್ಮಾವರ ಪೊಲೀಸ್ ಠಾಣೆಯತ್ತ ಪೊಲೀಸರ ಜೊತೆಗೆ ತಮ್ಮ ಖಾಸಗಿ ಕಾರಿನಲ್ಲಿ ತೆರಳಿದ್ದಾರೆ.

ಮಹೇಶ್ ಶೆಟ್ಟಿ ತಿಮರೋಡಿ ತಮ್ಮ ನಿವಾಸದಿಂದ ಹೊರ ಬರುತ್ತಿದ್ದಂತೆಯೇ ಬೆಂಬಲಿಗರು ಜಸ್ಟಿಸ್ ಫಾರ್ ಸೌಜನ್ಯ ಫೋಷಣೆ ಕೂಗಿದರು, ಭಾರತ್ ಮಾತಾ ಕಿ ಜೈ ಎಂದು ಕೂಗಿದರು. ಬಳಿಕ ತಮ್ಮ ಖಾಸಗಿ ಕಾರಿನಲ್ಲಿ ತಿಮರೋಡಿ ತೆರಳಿದರು. ಈ ವೇಳೆ ಅವರ ಜೊತೆಗೆ ಗಿರೀಶ್ ಮಟ್ಟಣ ಅವರು ಕೂಡ ತೆರಳಿದರು.

ಇನ್ನೂ ವಿಚಾರಣೆಗೆ ತೆರಳುವ ಮುನ್ನ ಮಾಧ್ಯಮಗಳಿಗೆ ಹೇಳಿಕೆ ನೀಡಿದ ಮಹೇಶ್ ಶೆಟ್ಟಿ ತಿಮರೋಡಿ, ನನ್ನ ಜೀವಕ್ಕೆ ಅಪಾಯವಾದ್ರೆ ರಾಜ್ಯ ಸರ್ಕಾರವೇ ಅದಕ್ಕೆ ನೇರ ಕಾರಣ ಎಂದರು. ಸುಳ್ಳು ಪ್ರಕರಣಗಳನ್ನು ದಾಖಲಿಸಿ ಎಸ್ ಐಟಿ ತನಿಖೆಯನ್ನು ಸ್ಥಗಿತಗೊಳಿಸುವ ಹುನ್ನಾರ ನಡೆಸಲಾಗಿದೆ ಎಂದು ಆರೋಪಿಸಿದರು. ಬಿಜೆಪಿ ನಾಯಕರು ಸುಳ್ಳು ದೂರುಗಳನ್ನು ದಾಖಲಿಸಿ ಎಸ್ ಐಟಿ ತನಿಖೆಯನ್ನು ಸ್ಥಗಿತಗೊಳಿಸಲು ಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದರು.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

ಇತ್ತೀಚಿನ ಸುದ್ದಿ