ಸಾ.ರಾ.ಮಹೇಶ್ ಪುತ್ರನ ಗಲಾಟೆ: ಕೈಕೈ ಮಿಲಾಯಿಸಿರುವ ವಿಡಿಯೋ ವೈರಲ್
ಮೈಸೂರು: ಮಾಜಿ ಶಾಸಕ ಸಾ.ರಾ.ಮಹೇಶ್ ಪುತ್ರ ಹಾಗೂ ಪತ್ರಕರ್ತರೊಬ್ಬರ ಮಗನ ನಡುವೆ ಮಾರಾಮಾರಿ ನಡೆದಿದ್ದು, ಪರಸ್ಪರ ಕೈಕೈ ಮಿಲಾಯಿಸಿಕೊಂಡಿರುವ ಘಟನೆ ವರದಿಯಾಗಿದೆ.
ಕುವೆಂಪು ನಗರದ ಕೆಫೆ ಬಿರಿಯಾನಿ ಹೊಟೇಲ್ ಮುಂಭಾಗದಲ್ಲಿ ಈ ಘಟನೆ ನಡೆದಿದ್ದು, ಸಾ.ರಾ.ಮಹೇಶ್ ಪುತ್ರ ಜಯಂತ್ ಹಾಗೂ ಪತ್ರಕರ್ತ ಗುರುರಾಜ್ ಎಂಬವರ ಪುತ್ರನ ನಡುವೆ ಗಲಾಟೆ ನಡೆದಿದೆ ಎನ್ನಲಾಗಿದೆ.
ಗಲಾಟಗೆ ಕಾರಣ ಏನು ಎನ್ನುವುದು ತಿಳಿದು ಬಂದಿಲ್ಲ, ಕ್ಷುಲ್ಲಕ ಕಾರಣಕ್ಕೆ ಈ ಗಲಾಟೆ ನಡೆದಿದೆ ಎನ್ನಲಾಗ್ತಿದೆ. ಗಲಾಟೆ ದೊಡ್ಡದಾಗುವ ಲಕ್ಷಣ ಕಂಡು ಬರುತ್ತಿದ್ದಂತೆಯೇ ಪೊಲೀಸರು ಮಧ್ಯಪ್ರವೇಶಿಸಿ ಇಬ್ಬರನ್ನೂ ವಶಕ್ಕೆ ಪಡೆದು ಬುದ್ಧಿಮಾತು ಹೇಳಿ ಮುಚ್ಚಳಿಕೆ ಬರೆಸಿ ಕಳಿಸಿದ್ದಾರೆ ಎಂದು ತಿಳಿದು ಬಂದಿದೆ. ಘಟನೆ ಸಂಬಂಧ ಯಾವುದೇ ದೂರು ದಾಖಲಾಗಿಲ್ಲ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/D73015iu7jn2glm2MECosd
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

























