11:20 PM Thursday 23 - October 2025

ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಗೆ ಡಿಕ್ಕಿ ಹೊಡೆದ ಕಾರು | ಐದು ಮಂದಿಗೆ ಗಾಯ: ಬೆಚ್ಚಿಬೀಳಿಸುವಂತಿದೆ ಸಿಸಿ ಕ್ಯಾಮರ ದೃಶ್ಯ

mudubidire accident
03/11/2022

ಮೂಡಬಿದ್ರೆ: ಕಾರು ಡಿಕ್ಕಿಯಾಗಿ ಮಹಿಳೆ ಹಾಗೂ ಕಾರಿನಲ್ಲಿದ್ದ ನಾಲ್ವರು ಗಾಯಗೊಂಡ ಘಟನೆ ಕಿನ್ನಿಗೋಳಿ ಮೂಡಬಿದ್ರೆ ರಾಜ್ಯ ಹೆದ್ದಾರಿಯ ಎಂಸಿಸಿ ಬ್ಯಾಂಕ್ ಬಳಿ ನಡೆದಿದೆ.

ಗಂಭೀರವಾಗಿ ಗಾಯಗೊಂಡ ಮಹಿಳೆಯನ್ನು ಜಯಂತಿ ಶೆಟ್ಟಿ (50) ಎಂದು ಗುರುತಿಸಲಾಗಿದೆ. ಉಳಿದಂತೆ ಕಾರಿನಲ್ಲಿದ್ದ ಚಾಲಕ ಕೆ.ಹೆಚ್.ಅಬ್ದುಲ್ ಖಾದರ್ (65), ರಿದಾ (16), ರಶ್ಮಿ (18), ಕೌಸರ್ (46)  ಗಾಯಗೊಂಡವರು ಎಂದು ಗುರುತಿಸಲಾಗಿದ್ದು, ಇವರನ್ನು ಕಿನ್ನಿಗೋಳಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಸುರತ್ಕಲ್  ಕೃಷ್ಣಾಪುರದಿಂದ ಮೂಡಬಿದ್ರೆಯ ತೋಡಾರ್ ಕಡೆಗೆ ಹೋಗುತ್ತಿದ್ದ ಕಾರು ಕಿನ್ನಿಗೋಳಿ ರಾಜ್ಯ ಹೆದ್ದಾರಿ ಎಂಸಿಸಿ ಬ್ಯಾಂಕ್ ಬಳಿ ತಲುಪುತ್ತಿದ್ದಂತೆ ಚಾಲಕನ ನಿಯಂತ್ರಣ ತಪ್ಪಿ ತೀರಾ ಬಲ ಬದಿಗೆ ಚಲಿಸಿ ಹೆದ್ದಾರಿ ಬದಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಗೆ ಡಿಕ್ಕಿ ಹೊಡೆದಿದೆ.



ಗಾಯಾಳು ಮಹಿಳೆ ಗಂಭೀರ ಗಾಯಗೊಂಡು ರಸ್ತೆಯಲ್ಲಿ ಬಿದ್ದಿರುವಾಗ ಸ್ಥಳೀಯರಾದ ಆಲ್ವಿನ್, ಸ್ಟ್ಯಾನಿ ಪಿಂಟೋ ಶೈಲಾ ಸಿಕ್ವೇರಾ ಮತ್ತಿತರರು ಸೇರಿ ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲು ನೆರವಾದರು.

ಅಪಘಾತದ ದೃಶ್ಯ ಸ್ಥಳೀಯ ಅಂಗಡಿಯ ಸಿಸಿ ಕ್ಯಾಮೆರಾದಲ್ಲಿ ರೆಕಾರ್ಡ್ ಆಗಿದ್ದು ಮಂಗಳೂರು ಉತ್ತರ ಟ್ರಾಫಿಕ್ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.

ಕಾರಿನ ಚಾಲಕನ ಆರೋಗ್ಯದಲ್ಲಿ ಏರುಪೇರು ಉಂಟಾದ ಕಾರಣ ಅಪಘಾತ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

YouTube video player

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/GoQnwP3qNkmAbAPcjb8n8F

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ

Exit mobile version