12:11 AM Thursday 21 - August 2025

ಮಹಿಳೆಯನ್ನು ಅತ್ಯಾಚಾರ ನಡೆಸಿದ ಬಳಿಕ ಅತ್ಯಾಚಾರಿಗಳಿಂದ ಅಮಾನವೀಯ ಕೃತ್ಯ

27/01/2021

ಜೈಪುರ: ಮಹಿಳೆಯೊಬ್ಬರನ್ನು ಅತ್ಯಾಚಾರ ಎಸಗಿ ಖಾಸಗಿ ಭಾಗಕ್ಕೆ ಗಾಜಿನ ಬಾಟಲಿ ನುಗ್ಗಿಸಿ ವಿಕೃತಿ ಮೆರೆದಿರುವ ಅಮಾನವೀಯ ಘಟನೆ ರಾಜಸ್ಥಾನದಲ್ಲಿ ನಡೆದಿದೆ.

ಜನವರಿ 19ರಂದು ಈ ಘಟನೆ ನಡೆದಿದೆ. ಆದರೆ ಪೊಲೀಸರ ನಿರ್ಲಕ್ಷ್ಯದಿಂದಾಗಿ ಈ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. 19ರಂದು ಮಹಿಳೆಯು ಅಂಗಡಿಗೆ ಹೋಗುತ್ತಿದ್ದ ವೇಳೆ ಆರೋಪಿಯೋರ್ವ ಅಡ್ಡಗಟ್ಟಿ ಮಹಿಳೆಯನ್ನು ನಿರ್ಜನ ಪ್ರದೇಶಕ್ಕೆ ಎಳೆದುಕೊಂಡು ಹೋಗಿದ್ದಾನೆ. ಅಲ್ಲಿ ಆತನ ಸ್ನೇಹಿತರ ಜೊತೆ ಸೇರಿ ಸಾಮೂಹಿಕ ಅತ್ಯಾಚಾರ ನಡೆಸಲಾಗಿದೆ.

ಅತ್ಯಾಚಾರದ ಬಳಿಕ ಮಹಿಳೆಯ ಖಾಸಗಿ ಭಾಗಕ್ಕೆ ಗಾಜಿನ ಬಾಟಲಿಯನ್ನು ಆರೋಪಿಗಳು ನುಗ್ಗಿಸಿದ್ದಾರೆ. ಘಟನೆಯ ಬಳಿಕ ಮಹಿಳೆ ಮನೆಗೆ ಬಂದು ವಿಚಾರ ತಿಳಿಸಿದ್ದಾರೆ. ಇದೇ ವೇಳೆ ಆರೋಪಿಗಳು ಮಹಿಳೆಯ ಮನೆಗೆ ಬಂದು ಪೊಲೀಸರಿಗೆ ದೂರು ನೀಡಿದರೆ, ಹತ್ಯೆ ಮಾಡುವುದಾಗಿ ಬೆದರಿಸಿದ್ದಾರೆ.

ಬೆದರಿಕೆಗೆ ಹೆದರಿ 6 ದಿನಗಳ ಬಳಿಕ ಮಹಿಳೆಯ ಕುಟುಂಬಸ್ಥರು ಪೊಲೀಸರಿಗೆ ದೂರು ನೀಡಿದ್ದಾರೆ.  ಪೊಲೀಸರು ಮೊದಲಿಗೆ ನಿರ್ಲಕ್ಷ್ಯವಹಿಸಿದ್ದಾರೆ. ಬಳಿಕ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮಹಿಳೆಯನ್ನು ಪರ್ಬತ್ಸರ್ ಆಸ್ಪತ್ರೆಗೆ ದಾಖಲಿಸಲಾಗಿದ್ದು ಮೂವರು ಆರೋಪಿಗಳಲ್ಲಿ ಒಬ್ಬನನ್ನು ಬಂಧಿಸಲಾಗಿದೆ.

ಇತ್ತೀಚಿನ ಸುದ್ದಿ

Exit mobile version