ಮಹಿಷಾ ದಸರಾ: ಭಾವನೆಗಳಿಗೆ ಧಕ್ಕೆಯಾಗದಂತೆ ಆಚರಿಸಿದರೆ ಸಂತೋಷ: ಸಂಸದ ಯದುವೀರ್ - Mahanayaka
9:47 AM Thursday 14 - November 2024

ಮಹಿಷಾ ದಸರಾ: ಭಾವನೆಗಳಿಗೆ ಧಕ್ಕೆಯಾಗದಂತೆ ಆಚರಿಸಿದರೆ ಸಂತೋಷ: ಸಂಸದ ಯದುವೀರ್

yaduveer
29/09/2024

ಉಡುಪಿ: ಮೈಸೂರಿನ ಚಾಮುಂಡಿ ಬೆಟ್ಟ ಧಾರ್ಮಿಕ ಪ್ರದೇಶ. ತಾಯಿ ಚಾಮುಂಡೇಶ್ವರಿ ಆಸ್ತಿ. ನಾವು ತಾಯಿಯನ್ನು ಮಹಿಷಾಸುರ ಮರ್ದಿನಿ ಎಂದು ನಂಬುತ್ತೇವೆ. ಆ ಭಾವನೆಗೆ ಧಕ್ಕೆ ಬಾರದಂತೆ ಮಹಿಷಾ ದಸರಾವನ್ನು ಆಚರಿಸಲಿ ಎಂದು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಹೇಳಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,  ಸಂವಿಧಾನದಲ್ಲಿ ಯಾವುದೇ ನಂಬಿಕೆಗಳನ್ನು ಇಟ್ಟುಕೊಳ್ಳಲು ಅವಕಾಶವಿದೆ.  ಮನೆಯಲ್ಲಿ ಯಾವುದೇ ಆಚರಣೆ ಮಾಡಬಹುದು, ಸಾರ್ವಜನಿಕ ಸ್ಥಳಗಳಲ್ಲಿ ಸರ್ಕಾರದ ಅನುಮತಿ ಪಡೆದು ಆಚರಣೆ ಮಾಡಬಹುದು, ಆದ್ರೆ ಭಾವನೆಗಳಿಗೆ ಧಕ್ಕೆಯಾಗದಂತೆ ಆಚರಿಸಿದರೆ ಸಂತೋಷ ಎಂದು ಅವರು ಹೇಳಿದರು.

ಇನ್ನೂ ಮೂಡಾ ಹಗರಣ ವಿಚಾರವಾಗಿ ಬಹಳಷ್ಟು ಚರ್ಚೆಗಳು ನಡೆದಿವೆ. ಎಫ್ ಐಆರ್ ಕೂಡ ದಾಖಲಾಗಿದೆ. ಸಿಎಂ ಸಿದ್ದರಾಮಯ್ಯ ಜವಾಬ್ದಾರಿಯುತ ಸ್ಥಾನದಲ್ಲಿದ್ದಾರೆ. ಅವರು ರಾಜೀನಾಮೆ ಕೊಟ್ಟು ತನಿಖೆ ಎದುರಿಸಲಿ  ಎಂದು ಅವರು ಹೇಳಿದರು.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.




ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/BHOOdLNNvmD17cBJslQgwj

ಇತ್ತೀಚಿನ ಸುದ್ದಿ