ಮಾಜಿ ಉಪ ಸಭಾಪತಿ ಧರ್ಮೇಗೌಡ ಆತ್ಮಹತ್ಯೆ | ಸಭಾಪತಿ ಸ್ಥಾನದಿಂದ ಎಳೆದು ಹಾಕಿದ್ದ ಘಟನೆಯಿಂದ ನೊಂದರೆ? - Mahanayaka

ಮಾಜಿ ಉಪ ಸಭಾಪತಿ ಧರ್ಮೇಗೌಡ ಆತ್ಮಹತ್ಯೆ | ಸಭಾಪತಿ ಸ್ಥಾನದಿಂದ ಎಳೆದು ಹಾಕಿದ್ದ ಘಟನೆಯಿಂದ ನೊಂದರೆ?

29/12/2020

ಬೆಂಗಳೂರು: ಕರ್ನಾಟಕ ರಾಜ್ಯ ವಿಧಾನಪರಿಷತ್ ಉಪ ಸಭಾಪತಿ, ಜೆಡಿಎಸ್ ಮುಖಂಡ ಎಲ್.ಎಲ್ ಧರ್ಮೇಗೌಡ(65) ಅವರು ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದು, ರಾತ್ರಿ ಡ್ರೈವರ್ ನ್ನು ಮನೆಯಿಂದ ಕರೆದುಕೊಂಡು ಹೋಗಿದ್ದ ಅವರು ಬೆಳಗ್ಗೆ ಆತ್ಮಹತ್ಯೆ ಮಾಡಿಕೊಂಡಿರುವ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.

ಧರ್ಮೇಗೌಡರು ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಗುಣಸಾಗರ ಬಳಿ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಖಾಸಗಿ ಡ್ರೈವರ್‌ನನ್ನು ಕಾರಿನಲ್ಲಿ ಕರೆದುಕೊಂಡು ಹೋಗಿದ್ದ ಧರ್ಮೇಗೌಡರು, ಗುಣಸಾಗರ ಸಕ್ಕರಾಯಪಟ್ಟಣದ ಬಳಿ 2 ಕಿ.ಮೀ ದೂರದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಧರ್ಮೇಗೌಡರ ಆತ್ಮಹತ್ಯೆ ಅತ್ಯಂತ ಭೀಕರವಾಗಿ ಕಂಡು ಬಂದಿದೆ. ಮೃತದೇಹದಿಂದ ಬೇರ್ಪಟ್ಟ ಮುಂಡ ನೂರುಮೀಟರ್ ದೂರದವರೆಗೆ ಹೋಗಿದೆ. ಈ ದೃಶ್ಯ ಹೃದಯ ವಿದ್ರಾವಕವಾಗಿತ್ತು.

ಇತ್ತೀಚೆಗೆ ವಿಧಾನ ಪರಿಷತ್ ಸಭಾಪತಿಗಳ ವಿರುದ್ಧ ಅವಿಶ್ವಾಸ ಮಂಡನೆ ಸಂದರ್ಭದಲ್ಲಿ ಪರಿಷತ್ ಕಲಾಪದಲ್ಲಿ ಹೈಡ್ರಾಮಾ ನಡೆದಿತ್ತು. ಆಗ ಸಭಾಪತಿ ಪ್ರತಾಪ್ ಚಂದ್ರ ಶೆಟ್ಟಿ ಅವರನ್ನು ಪರಿಷತ್ ಕಲಾಪಕ್ಕೆ ಬರದಂತೆ ಬಿಜೆಪಿ ಸದಸ್ಯರು ತಡೆದಿದ್ದರು. ಅದೇ ಸಂದರ್ಭದಲ್ಲಿ ಬಲವಂತವಾಗಿ ಉಪ ಸಭಾಪತಿ ಎಸ್.ಎಲ್. ಧರ್ಮೇಗೌಡ ಅವರನ್ನು ಸಭಾಪತಿ ಪೀಠದಲ್ಲಿ ಕೂರಿಸಲಾಗಿತ್ತು. ಆಗ ಸಭಾಪತಿ ಪೀಠದಿಂದ ಅವರನ್ನು ಕಾಂಗ್ರೆಸ್ ಸದಸ್ಯರು ಬಲವಂತವಾಗಿ ಎಳೆದು ಹಾಕಿದ್ದರು. ಈ ಘಟನೆ ಧರ್ಮೇಗೌಡರನ್ನು ತೀವ್ರವಾಗಿ ಕಾಡಿತ್ತು ಎಂದು ಹೇಳಲಾಗಿದೆ.

ಇನ್ನೂ ಘಟನಾ ಸ್ಥಳದಲ್ಲಿ ಧರ್ಮೇಗೌಡರ ಡೆತ್ ನೋಟ್ ಪತ್ತೆಯಾಗಿದೆ. ಆದರೆ ಈ ಡೆತ್ ನೋಟ್ ನಲ್ಲಿ ಏನಿದೆ ಎನ್ನುವುದನ್ನು ಇನ್ನೂ ಬಹಿರಂಗಪಡಿಸಲಾಗಿಲ್ಲ.

Disclaimer:

www.mahanayaka.in ಅಂತರ್ಜಾಲ ಮಾಧ್ಯಮದಲ್ಲಿ ಪ್ರಕಟವಾದ ಸುದ್ದಿಗಳಲ್ಲಿ ಯಾರದ್ದೇ ಭಾವನೆಗಳಿಗೆ ಧಕ್ಕೆಯಾಗುವಂತಹ ಅಥವಾ ನೋವುಂಟಾಗುವಂತಹ ಅಥವಾ ನಿಮಗೆ ಆಕ್ಷೇಪಾರ್ಹ ಎನಿಸಿದಂತಹ ಅಂಶಗಳ ಬಗ್ಗೆ ಓದುಗರು 9686872149 ನಂಬರ್ ಗೆ ಸುದ್ದಿಯ ಲಿಂಕ್ ಸಹಿತ ನಿಮ್ಮ ದೂರು ಸಲಹೆಗಳನ್ನು ವಾಟ್ಸಾಪ್ ಮಾಡಬಹುದು. ಅಥವಾ ಕರೆ ಮಾಡಬಹುದು. ನಿಮ್ಮ ದೂರನ್ನು ಪರಿಶೀಲಿಸಿ, ಅಂತಹ ಆಕ್ಷೇಪಾರ್ಹ ಅಂಶಗಳನ್ನು ತೆಗೆದು ಹಾಕಲು ಮಾಧ್ಯಮವು ಬದ್ಧವಾಗಿದೆ.

ಇತ್ತೀಚಿನ ಸುದ್ದಿ