ಜವಾಬ್ದಾರಿಯುತ ನಿರ್ಣಯ ಕೈಗೊಳ್ಳಿ: ಭಾರತ—ಪಾಕಿಸ್ತಾನಕ್ಕೆ ಅಮೆರಿಕ ಸಲಹೆ

modi trump
29/04/2025

ನವದೆಹಲಿ: ಭಾರತ ಹಾಗೂ ಪಾಕಿಸ್ತಾನ ನಡುವಣ ಬಿಕ್ಕಟ್ಟಿನ ಬೆಳವಣಿಗೆಗಳನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದೇವೆ. ನಾವು ಭಾರತ ಹಾಗೂ ಪಾಕಿಸ್ತಾನ ಸರ್ಕಾರಗಳೊಂದಿಗೆ ಸಂಪರ್ಕದಲ್ಲಿದ್ದೇವೆ ಎಂದು ಅಮೆರಿಕ ಅಮೆರಿಕ ಹೇಳಿದೆ.

ಬಿಕ್ಕಟ್ಟಿಗೆ “ಜವಾಬ್ದಾರಿಯುತ ನಿರ್ಣಯ” ಕೈಗೊಳ್ಳುವಂತೆ ಎರಡೂ ರಾಷ್ಟ್ರಗಳಿಗೆ ಅಮೆರಿಕ ವಿದೇಶಾಂಗ ಇಲಾಖೆಯ ವಕ್ತಾರರು  ಒತ್ತಾಯಿಸಿದ್ದಾರೆ.

ಇದೇ ವೇಳೆ ಪಹಲ್ಗಾಮ್‌ ನಲ್ಲಿ ನಡೆದ ಭಯೋತ್ಪಾದಕ ದಾಳಿಯನ್ನು ಬಲವಾಗಿ ಖಂಡಿಸುತ್ತೇವೆ. ಅಮೆರಿಕಾ ಭಾರತದ ಪರ ನಿಲ್ಲುತ್ತದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಾಗೂ ಅಮೆರಿಕದ ಉಪಾಧ್ಯಕ್ಷ ಜೆ.ಡಿ ವ್ಯಾನ್ಸ್ ಹೇಳಿಕೆಯನ್ನು ವಿದೇಶಾಂಗ ಸಚಿವಾಲಯ ಪುನರುಚ್ಚರಿಸಿದೆ.

ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ ನಲ್ಲಿ ಏಪ್ರಿಲ್ 22ರಂದು ಪ್ರವಾಸಿಗರನ್ನು ಗುರಿಯಾಗಿಸಿ ಉಗ್ರರು ನಡೆಸಿದ ದಾಳಿಯಲ್ಲಿ 26 ಮಂದಿ ಮೃತಪಟ್ಟು, ಹಲವರು ಗಾಯಗೊಂಡಿದ್ದರು. ಉಗ್ರರ ದಾಳಿಯ ಬೆನ್ನಲ್ಲೇ ಭಾರತ ಹಾಗೂ ಪಾಕಿಸ್ತಾನದ ನಡುವೆ ಉದ್ನಿಗ್ನ ವಾತಾವರಣ ನಿರ್ಮಾಣವಾಗಿದೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

ಇತ್ತೀಚಿನ ಸುದ್ದಿ

Exit mobile version