ನಕಲಿ ವೋಟರ್ ಐಡಿ ತಯಾರಿಕೆ: ಸಚಿವ ಭೈರತಿ ಸುರೇಶ್ ಆಪ್ತ ಸಿಸಿಬಿ ವಶಕ್ಕೆ!

fake voter id
21/10/2023

ಬೆಂಗಳೂರು:  ನಕಲಿ ವೋಟರ್ ಐಡಿ ತಯಾರಿಸುತ್ತಿದ್ದ ಸಚಿವ ಭೈರತಿ ಸುರೇಶ್ ಆಪ್ತ ಎನ್ನಲಾಗಿರುವ ವ್ಯಕ್ತಿಯನ್ನು ಸಿಸಿಬಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

ಈ ಬಗ್ಗೆ ಮಾಹಿತಿ ಪಡೆದು ಕನಕನಗರದಲ್ಲಿರುವ ಎಂಎಸ್‍ ಎಲ್ ಟೆಕ್ನೊ ಸಲ್ಯೂಷನ್ ಕಂಪನಿ ಮೇಲೆ ದಾಳಿ ನಡೆಸಲಾಗಿದೆ. ಪೊಲೀಸರು ಆರೋಪಿಗಳನ್ನು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ.

ಆರೋಪಿ ಯಾವುದೇ ಕ್ಷೇತ್ರದ ವೋಟರ್ ಐಡಿ ಹಾಗೂ ಯಾವುದೇ ಆಧಾರ್ ಕೇಳಿದರೂ ಮಾಡಿಕೊಡುತ್ತಿದ್ದ ಎಂಬ ಮಾಹಿತಿ ಲಭ್ಯವಾಗಿದೆ. ಈ ಸಂಬಂಧ ಹೆಬ್ಬಾಳ ಪೊಲೀಸ್ ಠಾಣೆಯಲ್ಲಿ ಎಫ್ ‍ಐಆರ್ ದಾಖಲಾಗಿದೆ.

ಇತ್ತೀಚಿನ ಸುದ್ದಿ

Exit mobile version