ಮಕ್ಕಳ ಸಹಿತ ಒಂದೇ ಕುಟುಂಬದ 6 ಮಂದಿ ಕೆರೆಗೆ ಹಾರಿ ಆತ್ಮಹತ್ಯೆ - Mahanayaka
9:42 AM Thursday 16 - October 2025

ಮಕ್ಕಳ ಸಹಿತ ಒಂದೇ ಕುಟುಂಬದ 6 ಮಂದಿ ಕೆರೆಗೆ ಹಾರಿ ಆತ್ಮಹತ್ಯೆ

shahapur
28/06/2021

ಶಹಾಪುರ: ಒಂದೇ ಕುಟುಂಬದ 6 ಮಂದಿ ಸಾಲಬಾಧೆ ತಾಳಲಾರದೆ ಬಾವಿಗೆ ಹಾರಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಾಲೂಕಿನ ದೋರನಹಳ್ಳಿ ಗ್ರಾಮದಲ್ಲಿ ನಡೆದಿದೆ.


Provided by

45 ವರ್ಷ ವಯಸ್ಸಿನ ಭೀಮರಾಯ ಸುರಪುರ, ಶಾಂತಮ್ಮ ಸುರಪುರ, ಸುಮಿತ್ರಾ(12), ಶ್ರೀದೇವಿ(13), ಶಿವರಾಜ(6), ಲಕ್ಷ್ಮೀ(4) ಆತ್ಮಹತ್ಯೆಗೆ ಶರಣಾಗಿರುವರಾಗಿದ್ದಾರೆ. ಘಟನೆಯ ಮಾಹಿತಿ ಪಡೆದು ಸ್ಥಳಕ್ಕೆ ಅಗ್ನಿಶಾಮಕ ದಳ ಸಿಬ್ಬಂದಿ ಆಗಮಿಸಿ ಕಾರ್ಯಾಚರಣೆ ನಡೆಸಿದ್ದಾರೆ.

ಈಗಾಗಲೇ ಕೆರೆಯಿಂದ ಐದು ಮೃತದೇಹಗಳನ್ನು ಹೊರತೆಗೆಯಲಾಗಿದ್ದು, ಕುಟುಂಬದ ಇನ್ನೊಬ್ಬರ ಮೃತದೇಹಕ್ಕಾಗಿ ಶೋಧ ನಡೆಸಲಾಗುತ್ತಿದೆ ಎಂದು ತಿಳಿದು ಬಂದಿದೆ.

ಇನ್ನೂ ಘಟನಾ ಸ್ಥಳಕ್ಕೆ ತಹಶೀಲ್ದಾರ್ ಜಗನ್ನಾಥ ರೆಡ್ಡಿ, ಪಿಎಸ್ ಐ ಶಾಮಸುಂದರ ನಾಯಕ, ಚಂದ್ರಕಾಂತ ಮೆಕಾಲೆ ಭೇಟಿ ನೀಡಿದ್ದು, ತನಿಖೆ ನಡೆಸುತ್ತಿದ್ದಾರೆ. ಕುಟುಂಬವು ತೀವ್ರ ಸಾಲದ ಹಿನ್ನೆಲೆಯಲ್ಲಿ ಆತ್ಮಹತ್ಯೆಗೆ ಶರಣಾಗಿದೆ ಎಂದು ಹೇಳಲಾಗುತ್ತಿದೆ. ಈ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಇತ್ತೀಚಿನ ಸುದ್ದಿ