ಮಳಲಿ ಮಸೀದಿ ಆಡಳಿತ ಮಂಡಳಿ ಅರ್ಜಿ ವಜಾ ಮಾಡಿದ ಕೋರ್ಟ್ - Mahanayaka

ಮಳಲಿ ಮಸೀದಿ ಆಡಳಿತ ಮಂಡಳಿ ಅರ್ಜಿ ವಜಾ ಮಾಡಿದ ಕೋರ್ಟ್

malali
09/11/2022


Provided by

ಮಂಗಳೂರು: ನಗರದ ಮಳಲಿ ಮಸೀದಿ ವಿವಾದ ಪ್ರಕರಣದಲ್ಲಿ ವಿಎಚ್ ಪಿ ಅರ್ಜಿ ಸ್ವೀಕರಿಸಿರುವ ಮಂಗಳೂರಿನ ಮೂರನೇ ಹೆಚ್ಚುವರಿ ಸಿವಿಲ್ ಕೋರ್ಟ್ ಮಸೀದಿ ಆಡಳಿತ ಮಂಡಳಿ ಸಲ್ಲಿಸಿರುವ ಅರ್ಜಿಯನ್ನು ವಜಾ ಮಾಡಿದೆ.

ಸಿವಿಲ್ ಕೋರ್ಟ್ ವ್ಯಾಪ್ತಿಯಲ್ಲೇ ನಡೆಯಲಿದೆ ಮಳಲಿ ಮಸೀದಿಯ ಅರ್ಜಿಯನ್ನು ವಿಚಾರಣೆ ಮಾಡಿರುವ ಮಂಗಳೂರಿನ ಮೂರನೇ ಹೆಚ್ಚುವರಿ ಸಿವಿಲ್ ಕೋರ್ಟ್ ನಿಂದ ಮಹತ್ವದ ತೀರ್ಪು ನೀಡಿದೆ.

ಮೂಲ ದಾವೆ ಆಲಿಸಲು ವಿಚಾರಣಾಧೀನ ನ್ಯಾಯಾಲಯದ ಅಧಿಕಾರ ವ್ಯಾಪ್ತಿ ಕುರಿತು ತೀರ್ಪು ನೀಡಿದೆ. ವಿಎಚ್ ಪಿ ಅರ್ಜಿ ಸ್ವೀಕರಿಸಿರುವ ನ್ಯಾಯಾಲಯದಿಂದ ಜನವರಿ 8, 2023ಕ್ಕೆ ಮುಂದಿನ ವಿಚಾರಣೆ ನಡೆಯಲಿದೆ.

ಮಸೀದಿ ಕಾಮಗಾರಿಗೆ ತಡೆಯಾಜ್ಞೆ ತೆರವು ಮಾಡಿ ವಿಎಚ್ ಪಿ ಅರ್ಜಿಯನ್ನು ವಜಾ ಮಾಡಲು ಮಸೀದಿ ಕಮಿಟಿ ಮನವಿ ಮಾಡಿತ್ತು. ಆದರೆ ಮಸೀದಿ ಕಮಿಟಿಯ ಅರ್ಜಿಯನ್ನು ನ್ಯಾಯಾಲಯ ವಜಾ ಮಾಡಿದೆ. ಈ ಮೂಲಕ ಜ್ಞಾನವಾಪಿ ಮಾದರಿಯಲ್ಲೇ ಮಳಲಿ ಮಸೀದಿ ವಿವಾದದ ವಿಚಾರಣೆ ನಡೆಯಲಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/GoQnwP3qNkmAbAPcjb8n8F

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ